Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:54 - ಕನ್ನಡ ಸತ್ಯವೇದವು C.L. Bible (BSI)

54 “ಇಗೋ ಕೇಳಿಬರುತ್ತಿದೆ ಬಾಬಿಲೋನಿನಿಂದ ಕೂಗಾಟ! ಆ ಬಾಬಿಲೋನಿಯರ ದೇಶದಿಂದ ಮಹಾ ವಿನಾಶದ ಕಿರುಚಾಟ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

54 “ಆಹಾ, ಬಾಬೆಲಿನಿಂದ ಮೊರೆಯೂ, ಕಸ್ದೀಯರ ದೇಶದಿಂದ ಮಹಾನಾಶದ ಶಬ್ದವೂ ಕೇಳಿ ಬರುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

54 ಆಹಾ, ಬಾಬೆಲಿನಿಂದ ಮೊರೆಯೂ ಕಸ್ದೀಯರ ದೇಶದಿಂದ ಮಹಾನಾಶನದ ಶಬ್ದವೂ ಕೇಳ ಬರುತ್ತವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

54 “ಬಾಬಿಲೋನಿನಲ್ಲಿ ಜನರು ರೋಧಿಸುವದನ್ನು ನಾವು ಕೇಳುವೆವು. ಬಾಬಿಲೋನ್ ಪ್ರದೇಶದಲ್ಲಿ ವಸ್ತುಗಳನ್ನು ನಾಶಮಾಡುವ ಜನರ ಧ್ವನಿಯನ್ನು ನಾವು ಕೇಳುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

54 “ಬಾಬಿಲೋನಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ದೊಡ್ಡ ನಾಶದ ಶಬ್ದವೂ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:54
10 ತಿಳಿವುಗಳ ಹೋಲಿಕೆ  

ಇಗೋ ಯುದ್ಧದ ಆರ್ಭಟ! ಮಹಾವಿನಾಶದ ಕೂಗಾಟ ನಾಡಿನೊಳಗೆಲ್ಲ!


ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು.


“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.


ಈ ಸುದ್ದಿ ಬಿತ್ತು ಬಾಬಿಲೋನಿನ ಅರಸನ ಕಿವಿಗೆ ಅವನ ಕೈಗಳಿದೋ ಜೋಲುಬಿದ್ದಿವೆ ಅವನನ್ನು ಹಿಡಿದಿದೆ ಪ್ರಸವವೇದನೆಯಂಥ ಯಾತನೆ.


ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!


ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.


ಅನ್ಯರ ಆರ್ಭಟವನು ನೀ ಅಡಗಿಸುವೆ, ಸುಡುವ ಒಣ ನೆಲವನು ಮೇಘ ತಣಿಸುವಂತೆ. ಕ್ರೂರಿಗಳ ಹರ್ಷೋದ್ಗಾರವನು ನಿಲ್ಲಿಸುವೆ, ಬಿಸಿಲನು ತಡೆಯುವ ಮೋಡದ ನೆರಳಿನಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು