Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:6 - ಕನ್ನಡ ಸತ್ಯವೇದವು C.L. Bible (BSI)

6 ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ; ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬೆಲಿಗೆ ಪ್ರತೀಕಾರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಾಬಿಲೋನಿನಿಂದ ದೂರ ಓಡಿಹೋಗಿರಿ. ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ಓಡಿಹೋಗಿರಿ. ಇಲ್ಲವಾದರೆ ಬಾಬಿಲೋನಿನ ಪಾಪದಿಂದ ನೀವೂ ಮರಣಕ್ಕೆ ಗುರಿಯಾಗುವಿರಿ. ಅವರು ಮಾಡಿದ ದುಷ್ಕೃತ್ಯಗಳಿಗಾಗಿ ದೇವರು ಬಾಬಿಲೋನಿನ ಜನರನ್ನು ಶಿಕ್ಷಿಸುವ ಕಾಲವಿದು. ಅದು ತಕ್ಕ ಶಿಕ್ಷೆಯನ್ನು ಪಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಬಾಬಿಲೋನಿನೊಳಗಿಂದ ಓಡಿಹೋಗಿರಿ; ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಪಾಪದಲ್ಲಿ ನಾಶವಾಗಬೇಡಿರಿ; ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:6
29 ತಿಳಿವುಗಳ ಹೋಲಿಕೆ  

“ಬಾಬಿಲೋನ್ ದೇಶದಿಂದ ಓಡಿಹೋಗಿ, ಬಾಬಿಲೋನಿಯರ ಆ ಸೀಮೆಯಿಂದ ಹೊರಡಿ. ಹಿಂಡುಗಳ ಮುಂದೆ ನಡೆಯುವ ಹೋತಗಳಂತೆ ಮುಂತೆರಳಿರಿ.


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.


ನನ್ನ ಜನರೇ, ಬಾಬಿಲೋನನ್ನು ಬಿಟ್ಟು ಹೊರಡಿ. ನನ್ನ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಿ.


ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”


ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.


ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.


ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.


“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.


ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;


ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.


ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.


ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”


ಅವರು ಅದನ್ನು ಕುಡಿದು ಓಲಾಡುವರು, ನಾನು ಕಳಿಸುವ ಖಡ್ಗದಿಂದ ಹುಚ್ಚುಚ್ಚಾಗುವರು.”


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.


‘ಅಡವಿಯ ಕಾಡುಕತ್ತೆಯಂತೆ ಓಡಿಹೋಗಿ ಪ್ರಾಣ ಉಳಿಸಿಕೊಳ್ಳಿ’ ಎನ್ನುತ್ತಿರುವರು.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.


ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು.


“ಹೇ, ಸರ್ವೇಶ್ವರಾ, ಅವರ ದುಷ್ಕೃತ್ಯಗಳಿಗೆ ತಕ್ಕ ಪ್ರತೀಕಾರ ನೀಡು ಅವರಿಗೆ.


ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು