Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:64 - ಕನ್ನಡ ಸತ್ಯವೇದವು C.L. Bible (BSI)

64 ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಯೆಹೋವನು ಬಾಬೆಲಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಣುಗುವದು, ಮತ್ತೆ ಏಳದು ಎಂದು ಹೇಳು. ಜನಗಳು ಆಯಾಸಗೊಂಡು ದುಡಿದದ್ದು [ಬೆಂಕಿಗೆ ತುತ್ತಾಗುವದು] ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:64
16 ತಿಳಿವುಗಳ ಹೋಲಿಕೆ  

ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”


ಅದು ಬೆಳೆಯಲಿ ಮುಳ್ಳುಗಳನ್ನು ಗೋದಿಗೆ ಬದಲಾಗಿ ಹಣಜಿಹುಲ್ಲನು ಜವೆಗೋದಿಗೆ ಪ್ರತಿಯಾಗಿ.” ಇತಿ, ಯೋಬನ ಮಾತುಗಳು ಮುಗಿದವು.


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.


ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ರಾಷ್ಟ್ರಗಳ ಕಣ್ಣಿಗೆ ಬಾಬಿಲೋನ್ ಭೀಕರವಾಗಿಬಿಟ್ಟಿದೆ, ಸಮುದ್ರವೆ ಬಾಬಿಲೋನಿಯದ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


ನಿನ್ನೀ ಗತಿ ನೋಡಿ ಬೆರಗಾದರು ನಿನ್ನನ್ನರಿತ ರಾಷ್ಟ್ರಗಳು ಪೂರ್ತಿಯಾಗಿ ನೀ ಧ್ವಂಸವಾದೆ, ಇಲ್ಲವಾದೆ ಇನ್ನೆಂದಿಗೂ.”


“ಆಗ ನೀನು, ನಿನ್ನ ಸಂಗಡ ಬಂದವರ ಕಣ್ಣೆದುರಿಗೇ ಆ ಮಣ್ಣಿನ ಮಡಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆಂದು ನುಡಿ :


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು