Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:7 - ಕನ್ನಡ ಸತ್ಯವೇದವು C.L. Bible (BSI)

7 ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆಯ ಹಾಗಿತ್ತು; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆ; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಬಾಬಿಲೋನ್ ಯೆಹೋವನ ಕೈಯಲ್ಲಿನ ಬಂಗಾರದ ಪಾತ್ರೆಯಂತಿತ್ತು. ಲೋಕವೆಲ್ಲವೂ ಮದ್ಯಪಾನ ಮಾಡುವಂತೆ ಬಾಬಿಲೋನ್ ಮಾಡಿತು. ಜನಾಂಗಗಳು ಬಾಬಿಲೋನಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:7
16 ತಿಳಿವುಗಳ ಹೋಲಿಕೆ  

ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಆ ಪ್ರತಿಮೆಯ ತಲೆ ಅಪ್ಪಟ ಬಂಗಾರದ್ದು. ಎದೆ ತೋಳುಗಳು ಬೆಳ್ಳಿಯವು. ಹೊಟ್ಟೆ ಸೊಂಟಗಳು ಕಂಚಿನವು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.


ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.


ಆಗ ನೀನು ಅವರಿಗೆ - ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿ : ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಜೆರುಸಲೇಮಿನ ಎಲ್ಲ ನಿವಾಸಿಗಳನ್ನೂ, ಅಂತು ನಾಡಿನ ಜನರೆಲ್ಲರನ್ನೂ ಅಮಲಿನಿಂದ ಮತ್ತರಾಗುವಂತೆ ಮಾಡುವೆನು.


ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು