Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:9 - ಕನ್ನಡ ಸತ್ಯವೇದವು C.L. Bible (BSI)

9 ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಬಾಬೆಲನ್ನು ಸ್ವಸ್ಥಮಾಡುವುದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಬಾಬೆಲನ್ನು ಸ್ವಸ್ಥಮಾಡುವದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ಬಾಬಿಲೋನನ್ನು ವಾಸಿಮಾಡುವ ಪ್ರಯತ್ನ ಮಾಡಿದೆವು. ಆದರೆ ಅದನ್ನು ವಾಸಿಮಾಡಲು ಆಗುವದಿಲ್ಲ. ಆದ್ದರಿಂದ ಅದನ್ನು ಬಿಟ್ಟುಬಿಡೋಣ. ನಾವು ನಮ್ಮನಮ್ಮ ದೇಶಗಳಿಗೆ ಹೋಗೋಣ. ಪರಲೋಕದ ದೇವರು ಬಾಬಿಲೋನಿಗೆ ವಿಧಿಸಬೇಕಾದ ಶಿಕ್ಷೆಯನ್ನು ನಿರ್ಧರಿಸುವನು. ಬಾಬಿಲೋನಿಗೆ ಏನಾಗಬೇಕೆಂಬುದನ್ನು ಆತನು ನಿರ್ಧರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ ‘ನಾವು ಬಾಬಿಲೋನನ್ನು ವಾಸಿಮಾಡಲು ಪ್ರಯತ್ನಿಸಿದೆವು; ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳವರೆಗೂ ಏರುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:9
13 ತಿಳಿವುಗಳ ಹೋಲಿಕೆ  

ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ.


ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


“ಬೇಟೆಗಾರನಿಂದ ತಪ್ಪಿಸಿಕೊಂಡು ಓಡುತ್ತಿರುವ ಜಿಂಕೆಯಂತೆಯೂ ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನು ಸ್ವಜನರ ಕಡೆಗೆ ತಿರುಗುವನು; ಸ್ವದೇಶದ ಕಡೆಗೆ ಓಡುವನು.


ಬಹುಜನರು ಮುಗ್ಗರಿಸಿ ಬಿದ್ದರು ಹೌದು, ಒಬ್ಬರಿಗೊಬ್ಬರು ತಾಕಿ ಬಿದ್ದರು. ‘ಎದ್ದು ಜನ್ಮಭೂಮಿಗೆ ತೆರಳೋಣ ಸ್ವಜನರನ್ನು ಸೇರಿಕೊಳ್ಳೋಣ ಸಂಹರಿಸುವ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.


“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!


ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.


ಜನರು : “ಸುಗ್ಗಿ ಮುಗಿಯಿತು, ಹಣ್ಣಿನಕಾಲ ಕಳೆಯಿತು. ನಮಗಾದರೊ ರಕ್ಷಣೆ ದೊರಕದೆಹೋಯಿತು.”


ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”


ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು.


ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು