Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:17 - ಕನ್ನಡ ಸತ್ಯವೇದವು C.L. Bible (BSI)

17 ಬಾಬಿಲೋನಿಯರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ ಕಂಚಿನ ಕಡಲೆಂಬ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ ಪೀಠಗಳನ್ನೂ ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು ಅವುಗಳ ಎಲ್ಲಾ ತಾಮ್ರವನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಾಬಿಲೋನಿನ ಸೈನಿಕರು ಪವಿತ್ರಾಲಯದ ಕಂಚಿನ ಕಂಬಗಳನ್ನು ಮುರಿದರು. ಅವರು ಯೆಹೋವನ ಆಲಯದಲ್ಲಿದ್ದ ಪೀಠಗಳನ್ನು ಮತ್ತು ಕಂಚಿನ ಸರೋವರಗಳನ್ನು ಸಹ ಮುರಿದುಬಿಟ್ಟರು. ಅವರು ಎಲ್ಲಾ ಕಂಚಿನ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಎಲ್ಲಾ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:17
12 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು . ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.


ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ !


ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,


‘ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಯಾಕ್ಕೆ ಕೊಂಡೊಯ್ಯುವ ದಿನ ಬರುವುದು; ಇಲ್ಲೇನೂ ಉಳಿಯುವುದಿಲ್ಲ.


ಅರಸ ಸೊಲೊಮೋನನು ಸರ್ವೇಶ್ವರನಾಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಂಚಿನ ಕಡಲೆಂಬ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.


ದ್ವಾರಮಂಟಪದ ಉದ್ದ ಹತ್ತು ಮೀಟರ್, ಅಗಲ ಐದುವರೆ ಮೀಟರ್ ಇದ್ದವು. ಹತ್ತು ಮೆಟ್ಟಲುಗಳನ್ನು ಹತ್ತಿ ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ನಿಲವುಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು