ಯೆರೆಮೀಯ 52:3 - ಕನ್ನಡ ಸತ್ಯವೇದವು C.L. Bible (BSI)3 ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ಯೆರೂಸಲೇಮಿನವರ ಮೇಲೆಯೂ ಮತ್ತು ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ, ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಯೆರೂಸಲೇವಿುನವರ ಮೇಲೆಯೂ ಬೇರೆ ಎಲ್ಲಾ ಯೆಹೂದ್ಯರ ಮೇಲೆಯೂ ಇದನ್ನೆಲ್ಲಾ ಬರಮಾಡಿ ಕಡೆಯಲ್ಲಿ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವಷ್ಟು ರೋಷವುಳ್ಳವನಾದನು. ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರಿಗಿಬಿದ್ದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋವನಿಗೆ ಅವರ ಮೇಲೆ ಕೋಪ ಬಂದುದರಿಂದ ಜೆರುಸಲೇಮ್ ಮತ್ತು ಯೆಹೂದಗಳಿಗೆ ವಿಪತ್ತುಗಳು ಸಂಭವಿಸಿದವು. ಕೊನೆಗೆ, ಯೆಹೋವನು ಜೆರುಸಲೇಮ್ ಮತ್ತು ಯೆಹೂದದ ಜನರನ್ನು ತನ್ನಿದ ದೂರ ಎಸೆದುಬಿಟ್ಟನು. ಚಿದ್ಕೀಯನು ಬಾಬಿಲೋನ್ ರಾಜನ ವಿರುದ್ಧವಾಗಿ ದಂಗೆ ಎದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು. ಅಧ್ಯಾಯವನ್ನು ನೋಡಿ |