Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:31 - ಕನ್ನಡ ಸತ್ಯವೇದವು C.L. Bible (BSI)

31 ಎವೀಲ್ಮೆರೋದಕನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ, ಅಂದರೆ ಜುದೇಯದ ಅರಸ ಯೆಹೋಯಾಕೀಮನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ, ಯೆಹೋಯಾಕೀಮನನ್ನು ಕ್ಷಮಿಸಿ ಸೆರೆಯಿಂದ ಬಿಡುಗಡೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಬಾಬೆಲಿನ ಅರಸನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರುಷದಲ್ಲಿ ಅಂದರೆ ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರುಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿ ಅವನನ್ನು ಮೇಲಕ್ಕೆ ಎತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿವಸದಲ್ಲಿ ಆದದ್ದೇನೆಂದರೆ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:31
8 ತಿಳಿವುಗಳ ಹೋಲಿಕೆ  

ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.


ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II


ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ.


ದೇವರು ಕೆಳಕ್ಕೆ ದಬ್ಬುತ್ತಾನೆ ಗರ್ವಿಗಳನು ಉದ್ಧರಿಸುತ್ತಾನೆ ದೀನಮನಸ್ಕರನು.


ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ.


ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು