Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 52:8 - ಕನ್ನಡ ಸತ್ಯವೇದವು C.L. Bible (BSI)

8 ಬಾಬಿಲೋನಿಯದ ಸೈನಿಕರು ಅರಸ ಚಿದ್ಕೀಯನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಅವನನ್ನು ಯೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದುರಿ ಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕಸ್ದೀಯರ ಸೈನ್ಯದವರು ಅರಸನಾದ ಚಿದ್ಕೀಯನನ್ನು ಹಿಂದಟ್ಟಿ ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಎಲ್ಲಾ ಸೈನಿಕರು ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬೆನ್ನಟ್ಟಿದರು. ಅವರು ಅವನನ್ನು ಜೆರಿಕೊವಿನ ಬಯಲಿನಲ್ಲಿ ಹಿಡಿದರು. ಚಿದ್ಕೀಯನ ಎಲ್ಲಾ ಸೈನಿಕರು ಓಡಿಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 52:8
13 ತಿಳಿವುಗಳ ಹೋಲಿಕೆ  

ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.


ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.


ಈ ಜುದೇಯದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತಾಡುವನು.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ಬಾಬಿಲೋನಿಯದ ಸೈನಿಕರು ಅವರನ್ನು ಹಿಂದಟ್ಟುತ್ತಾ ಜೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ಹಿಡಿದರು. ಹಮಾತ್ ನಾಡಿನ ರಿಬ್ಲದಲ್ಲಿದ್ದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದರು.


ಅಲ್ಲದೆ ಯೆರೆಮೀಯನು ಅರಸ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿದ್ದಕ್ಕೆ ನಾನು ನಿಮಗಾಗಲಿ, ನಿಮ್ಮ ಸೇವಕರಿಗಾಗಲಿ, ಇಲ್ಲಿಯ ಜನರಿಗಾಗಲಿ ಮಾಡಿದ ಅಪರಾಧವೇನು?


ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು