Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:1 - ಕನ್ನಡ ಸತ್ಯವೇದವು C.L. Bible (BSI)

1 ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಬೆನ್ಯಾಮೀನ್ ಕುಲದವರೇ, ಯೆರೂಸಲೇಮಿನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ, ಏಕೆಂದರೆ ಉತ್ತರ ದಿಕ್ಕಿನಿಂದ ಅತಿನಾಶಕರವಾದ ವಿಪತ್ತು ತಲೆದೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಬೆನ್ಯಾಮೀನ್ ಕುಲದವರೇ, ಯೆರೂಸಲೇವಿುನೊಳಗಿಂದ ವಲಸೆ ಹೋಗಿರಿ, ತೆಕೋವದಲ್ಲಿ ಕೊಂಬನ್ನೂದಿರಿ, ಬೇತ್‍ಹಕ್ಕೆರೆವಿುನಲ್ಲಿ ಧ್ವಜವನ್ನೆತ್ತಿರಿ; ಏಕಂದರೆ ಅತಿನಾಶಕವಾದ ವಿಪತ್ತು ಬಡಗಲಿಂದ ತಲೆದೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆನ್ಯಾಮೀನನ ಕುಲದವರೇ, ನಿಮ್ಮ ಪ್ರಾಣ ರಕ್ಷಣೆಗಾಗಿ ಓಡಿಹೋಗಿರಿ; ಜೆರುಸಲೇಮ್ ನಗರದಿಂದ ಓಡಿಹೋಗಿರಿ. ತೆಕೋವ ನಗರದಲ್ಲಿ ಯುದ್ಧದ ತುತ್ತೂರಿಗಳನ್ನು ಊದಿರಿ; ಬೇತ್‌ಹಕ್ಕೆರೆಮಿನಲ್ಲಿ ಎಚ್ಚರಿಕೆಯ ಧ್ವಜಗಳನ್ನು ಹಾರಿಸಿರಿ. ಉತ್ತರದಿಕ್ಕಿನಿಂದ ವಿಪತ್ತು ಬರುತ್ತಿರುವುದರಿಂದ ಇವೆಲ್ಲವನ್ನು ಮಾಡಿರಿ. ಭಯಂಕರವಾದ ವಿನಾಶವು ನಿಮಗೆ ಬರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:1
19 ತಿಳಿವುಗಳ ಹೋಲಿಕೆ  

ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು.


ಮತ್ತೆ ಸರ್ವೇಶ್ವರ ಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ.


ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;


ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.


ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ : ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’


ರಾಹುತರ ಹಾಗೂ ಬಿಲ್ಲುಗಾರರ ಅಬ್ಬರಕ್ಕೆ ಓಡುತ್ತಿರುವವರು ಪಟ್ಟಣಿಗರೆಲ್ಲರು ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ. ಅತ್ತ ಬಂಡೆಗಳನ್ನು ಹತ್ತುತ್ತಿದ್ದಾರೆ. ಪ್ರತಿಯೊಂದು ಪಟ್ಟಣ ಪಾಳುಬಿದ್ದ ಬೀಡು ಅದರಲ್ಲಿ ಮತ್ತೆ ವಾಸಮಾಡುವವರು ಒಬ್ಬರೂ ಇಲ್ಲ.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?


ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳ ರಥ ಅದನ್ನು ಹಿಂಬಾಲಿಸಿ ಪಶ್ಚಿಮಕ್ಕೆ ಹೋಯಿತು. ಮಚ್ಚೆ ಕುದುರೆಗಳ ರಥ ದಕ್ಷಿಣ ದೇಶಕ್ಕೆ ತೆರಳಿತು.


ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು