Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:10 - ಕನ್ನಡ ಸತ್ಯವೇದವು C.L. Bible (BSI)

10 ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾನು, ಯಾರ ಸಂಗಡ ಮಾತನಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರ ಕಿವಿ ಮುಚ್ಚಲ್ಪಟ್ಟಿವೆ. ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 [ಅದಕ್ಕೆ ನಾನು] - ಯಾರ ಸಂಗಡ ಮಾತಾಡಿ ಅವರು ಗಮನಿಸುವಂತೆ ಸಾಕ್ಷಿಕೊಡಲಿ? ಇಗೋ, ಅವರು ಕರ್ಣಶುದ್ಧಿಯಿಲ್ಲದವರು, ಕೇಳಲಾರರು; ಅಯ್ಯೋ, ಯೆಹೋವನ ಮಾತು ಅವರಿಗೆ ತಿರಸ್ಕಾರ, ಅದರಲ್ಲಿ ಅವರಿಗೆ ಆನಂದವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಯಾರೊಂದಿಗೆ ಮಾತನಾಡಲಿ? ನಾನು ಯಾರಿಗೆ ಎಚ್ಚರಿಕೆಯ ನುಡಿಗಳನ್ನು ಹೇಳಲಿ? ನನ್ನ ಮಾತನ್ನು ಯಾರು ಕೇಳುತ್ತಾರೆ? ಇಸ್ರೇಲಿನ ಜನರು ತಮ್ಮ ಕಿವಿಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ನನ್ನ ಎಚ್ಚರಿಕೆಯ ನುಡಿಗಳನ್ನು ಕೇಳಲಾರರು. ಜನರಿಗೆ ಯೆಹೋವನ ಉಪದೇಶ ರುಚಿಸುವದಿಲ್ಲ. ಅವರು ಯೆಹೋವನ ನುಡಿಗಳನ್ನು ಕೇಳಬಯಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಮುಚ್ಚಿಹೋಗಿವೆ. ಇಗೋ, ಯೆಹೋವ ದೇವರ ವಾಕ್ಯವು ಅವನಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:10
40 ತಿಳಿವುಗಳ ಹೋಲಿಕೆ  

ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.


ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?


ಅದಕ್ಕೆ ಮೋಶೆ ಸರ್ವೇಶ್ವರನ ಸನ್ನಿಧಿಯಲ್ಲಿ, “ಆಲಿಸಬೇಕು, ಇಸ್ರಯೇಲರೇ ನನ್ನ ಮಾತನ್ನು ಕೇಳಲಿಲ್ಲ; ಇನ್ನು ಫರೋಹನು ಕಿವಿಗೊಟ್ಟಾನೆ? ನನಗಾದರೂ ಚುರುಕಾದ ನಾಲಿಗೆಯಿಲ್ಲ,” ಎಂದನು.


ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.


ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.


ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ಞನು, “ಬೋಧಕರೇ, ನೀವು ಹೀಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು,” ಎಂದನು.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.


ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.


ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸಜ್ಜನರನ್ನು ಎಚ್ಚರಿಸಲಿ; ಕೊಂಬಿನ ಕೂಗನ್ನು


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II


ನಾ ಬದುಕುವಂತೆ ತೋರೆನಗೆ ನಿನ್ನ ದಯ I ನಿನ್ನ ಧರ್ಮಶಾಸ್ತ್ರ ನನಗೆ ಪರಮಪ್ರಿಯ II


ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II


ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II


ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II


ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II


ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


ಏಕೆಂದರೆ ಈ ಎಲ್ಲ ಜನಾಂಗದವರು, ಇಸ್ರಯೇಲ್ ವಂಶದವರು ಕೂಡ, ಹೃದಯದಲ್ಲಿ ಸುನ್ನತಿಯಿಲ್ಲದವರು. ಇದು ಸರ್ವೇಶ್ವರನಾದ ನಾನು ಆಡುವ ಮಾತು.”


ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.


ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.


“ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.


ಇಸ್ರಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು