Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:11 - ಕನ್ನಡ ಸತ್ಯವೇದವು C.L. Bible (BSI)

11 ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು; ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಸಂಘದ ಮೇಲೂ ಅದನ್ನು ಹೊಯ್ದುಬಿಡಬೇಕು; ಗಂಡನೂ ಹೆಂಡತಿಯೂ ಮುದುಕನೂ ಮುಪ್ಪಿನ ಮುದುಕನೂ (ಅಂತು ಎಲ್ಲರೂ) ಅಪಹರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನ ರೋಷವು ನನ್ನಲ್ಲಿ ತುಂಬಿತುಳುಕುತ್ತಿದೆ, ತಡೆದುತಡೆದು ನನಗೆ ಸಾಕಾಗಿದೆ. “ಬೀದಿಯಲ್ಲಾಡುವ ಮಕ್ಕಳ ಮೇಲೆ ಅದನ್ನು ಹೊಯ್ದುಬಿಡಬೇಕು. ಒಂದೆಡೆ ಸೇರುವ ತರುಣರ ಮೇಲೆ ಅದನ್ನು ಹೊಯ್ದುಬಿಡಬೇಕು. ಗಂಡಹೆಂಡತಿಯರಿಬ್ಬರನ್ನು ಅಪಹರಿಸಲಾಗುವುದು. ಮುದುಕರನ್ನೂ ಮುಪ್ಪಿನ ಮುದುಕರನ್ನೂ ಅಪಹರಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:11
22 ತಿಳಿವುಗಳ ಹೋಲಿಕೆ  

‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.


ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.


ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.


ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು.


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು.


ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.


ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !


ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದುಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?


ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು