Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:14 - ಕನ್ನಡ ಸತ್ಯವೇದವು C.L. Bible (BSI)

14 ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸಮಾಧಾನವಿಲ್ಲದಿದ್ದರೂ, ಸಮಾಧಾನ ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮೇಲಾಗದಿದ್ದರೂ ಮೇಲು ಮೇಲು ಎಂದು ಹೇಳಿ ನನ್ನ ಜನರ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪ್ರವಾದಿಗಳು ಮತ್ತು ಯಾಜಕರು ನನ್ನ ಜನರಿಗಾದ ದೊಡ್ಡ ಗಾಯಗಳಿಗೆ ಚಿಕ್ಕಗಾಯಗಳಿಗೋ ಎಂಬಂತೆ ಚಿಕಿತ್ಸೆ ಮಾಡುತ್ತಾರೆ. ವಾಸಿಯಾಗಿಲ್ಲದಿದ್ದರೂ ‘ವಾಸಿಯಾಗಿದೆ’ ಎನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:14
21 ತಿಳಿವುಗಳ ಹೋಲಿಕೆ  

“ಅಶಾಂತಿಯಿರುವಾಗಲೂ ಅವರು ಶಾಂತಿಯಿದೆ ಎಂದು ಹೇಳಿ ನನ್ನ ಜನಗಳನ್ನು ವಂಚಿಸಿದ್ದಾರೆ. ಜನರು ದುರ್ಬಲ ಗೋಡೆಯನ್ನು ಕಟ್ಟಿದ್ದಾರೆ. ಅದಕ್ಕೆ ಆ ಪ್ರವಾದಿಗಳು ಸುಣ್ಣ ಬಳಿಯುತ್ತಾರೆ;


ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”


ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.


ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.


“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.


ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.


ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರುಗಿ ನಿಮ್ಮ ಬಳಿಗೆ ಬರಮಾಡುವೆನು. ನಿಮ್ಮ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ನಾಡಿನಲ್ಲಿ ಎಲ್ಲಾ ಸಮಾಧಾನವುಂಟಾಗುವುದು,” ಎಂದು ಹೇಳಿದನು.


ಇವರು ದಿವ್ಯದರ್ಶಿಗಳನ್ನು ನೋಡಿ : “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ : “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.


‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’


“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು