Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:19 - ಕನ್ನಡ ಸತ್ಯವೇದವು C.L. Bible (BSI)

19 ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ ನನ್ನ ಧರ್ಮಬೋಧನೆಯನ್ನು ಅಸಡ್ಡೆ ಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಭೂಲೋಕದ ಜನರೇ, ಕೇಳಿರಿ, ಆ ಜನರು ಮಾಡಿದ ಎಲ್ಲಾ ಕುಯುಕ್ತಿಗಳಿಗಾಗಿ ನಾನು ಯೆಹೂದ ಜನರಿಗೆ ವಿನಾಶವನ್ನು ತರುವೆನು. ಅವರು ನನ್ನ ಸಂದೇಶಗಳಿಗೆ ಗಮನ ಕೊಡದೆ ಇದ್ದುದರಿಂದ, ಅವರು ನನ್ನ ಧರ್ಮಶಾಸ್ತ್ರವನ್ನು ಅಸಡ್ಡೆ ಮಾಡಿದ್ದರಿಂದ ಇದೆಲ್ಲ ನಡೆಯುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:19
37 ತಿಳಿವುಗಳ ಹೋಲಿಕೆ  

ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.


ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?


ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.


“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”


ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ನಾಡೇ, ನಾಡೇ, ಎಲೈ ನಾಡೇ, ಸರ್ವೇಶ್ವರನ ಮಾತಿಗೆ ಕಿವಿಗೊಡು.


ಅದಕ್ಕೆ ನಾನು, “ಅಯ್ಯೋ ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ . ಅವರು ಕೇಳಿಸಿಕೊಳ್ಳುವುದಿಲ್ಲ . ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ದುರುಳರ ಕುಯುಕ್ತಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರ ಸುಸೂಕ್ತಿ ಆತನಿಗೆ ಪ್ರಿಯ.


ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.


ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಆದುದರಿಂದ ಸರ್ವೇಶ್ವರ : “ರಾಷ್ಟ್ರಗಳೇ ಆಲಿಸಿ. ನನ್ನ ಜನರಿಗೆ ಸಂಭವಿಸಲಿರುವುದನ್ನು ಗಮನಿಸಿ.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.


‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.


ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದೆಹೋದರು. ನನ್ನ ದಾಸರಾದ ಪ್ರವಾದಿಗಳನ್ನು ಪದೇಪದೇ ಅವರ ಬಳಿಗೆ ಕಳಿಸಿದರೂ ಕೇಳಲೊಲ್ಲದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.


ತಮ್ಮ ಪ್ರಾಣ ಹುಡುಕುವ ಶತ್ರುಗಳ ಮುಂದೆ ಆ ಏಲಾಮ್ಯರು ನಡುಗುವಂತೆ ಮಾಡುವೆನು. ನನ್ನ ಕೋಪಾಗ್ನಿಯ ಬಿಸಿ ಅವರಿಗೆ ತಟ್ಟುವಂತೆ ಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅವರು ನಿರ್ಮೂಲವಾಗುವ ತನಕ ಅವರ ಹಿಂದೆಯೇ ಖಡ್ಗವನ್ನು ಕಳುಹಿಸುವೆನು.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.


ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.


ಇಗೋ ಅವರು ರಾಷ್ಟ್ರಗಳಿಗೆ ಅರುಹಿಸುವ ಸಮಾಚಾರ : ಮುತ್ತಿಗೆ ಹಾಕುವವರು ದೂರದೇಶದಿಂದ ಜೆರುಸಲೇಮಿಗೆ ಬರುವರು. ಜುದೇಯದ ಪಟ್ಟಣಗಳಿಗೆ ವಿರುದ್ಧ ಘೋಷಣೆಗಳನ್ನು ಪ್ರಕಟಿಸುವರು.


ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.


ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”


ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು