Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:26 - ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಜನರಿಗೆ : “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಓ ನನ್ನ ಮಗಳೇ, ನನ್ನ ಪ್ರಜೆಗಳೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು. ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ, ಬಹು ಕಠಿಣವಾದ ಗೋಳಾಟವನ್ನು ಮಾಡು. ನಾಶ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:26
42 ತಿಳಿವುಗಳ ಹೋಲಿಕೆ  

“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.


ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ. ಕಣ್ಣೀರಿಟ್ಟು ಗೋಳಾಡಿರಿ. ನಗುವುದನ್ನು ಬಿಟ್ಟು ದುಃಖಿಸಿರಿ; ಸಂತೋಷವನ್ನು ಬಿಟ್ಟು ಶೋಕಿಸಿರಿ.


ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.


ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”


ಕರುಣಾಮಯಿಗಳಾದ ಹೆಂಗಳೆಯರು ತಮ್ಮ ಕಂದಮ್ಮಗಳನ್ನು ಸ್ವಂತ ಕೈಯಿಂದ ಬೇಯಿಸಿದರು. ನನ್ನ ಜನರ ಪರಿವಿನಾಶದ ಕಾಲದೊಳು ತಮ್ಮ ತಾಯಿಗಳಿಗೆ ತಿಂಡಿಯಾದರು ಆ ಹಸುಳೆಗಳು.


‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!


ಮರಿಗಳಿಗೆ ಮೊಲೆಕೊಟ್ಟು ಹಾಲುಣಿಸುತ್ತವೆ ನರಿಗಳು ನನ್ನ ಜನರು ಆಗಿಹರು ಕಾಡಿನ ಉಷ್ಟ್ರಪಕ್ಷಿಯಂತೆ ಕ್ರೂರಿಗಳು.


ಸ್ವಜನರು ನಾಶವಾದ ಕಾರಣದಿಂದಾಗಿ ಹರಿಯುತ್ತಿದೆ ನನ್ನ ಕಣ್ಣೀರು ತೊರೆಯಾಗಿ.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ನನ್ನ ಪ್ರಜೆಯೆಂಬಾಕೆಯ ವೇದನೆಯಿಂದಲೆ ನಾನು ಅನುಭವಿಸುತ್ತಿರುವೆ ಮನೋಯಾತನೆ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು !


ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.


ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.


ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು.


ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ನನ್ನ ಹಲ್ಲು ಮುರಿದಿದ್ದಾನೆ ನುರುಜುಗಲ್ಲಿನಿಂದ ನನ್ನನ್ನು ಮುಚ್ಚಿಬಿಟ್ಟಿದ್ದಾನೆ ಬೂದಿಯಿಂದ.


ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.


ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.


ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.


“ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು