Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:27 - ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ ಯೆರೆಮೀಯನಿಗೆ ಹೀಗೆ ಎಂದರು : “ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ. ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ನನಗೆ, “ನಾನು ನಿನ್ನನ್ನು ನನ್ನ ಜನವೆಂಬ ಅದಿರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ನನಗೆ - ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇವಿುಸಿದ್ದೇನೆ; ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಯೆರೆಮೀಯನೇ, ನಾನು ನಿನ್ನನ್ನು ಒಬ್ಬ ಲೋಹ ಪರೀಕ್ಷಕನನ್ನಾಗಿ ನೇಮಿಸಿದ್ದೇನೆ. ನೀನು ನನ್ನ ಜನರನ್ನು ಪರೀಕ್ಷಿಸು. ಅವರ ವ್ಯವಹಾರವನ್ನು ಅವಲೋಕಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ನೀನು ನನ್ನ ಜನರ ಮಾರ್ಗವನ್ನು ಪರೀಕ್ಷಿಸಿ ತಿಳಿದುಕೊಳ್ಳುವಂತೆ, ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಲೋಹ ಶೋಧಕನನ್ನಾಗಿ ನೇಮಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:27
6 ತಿಳಿವುಗಳ ಹೋಲಿಕೆ  

ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.


ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.


“ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -


“ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನೀನೂ ಮನಸ್ಸು ಮಾಡಿರುವೆಯಾ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು