Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:29 - ಕನ್ನಡ ಸತ್ಯವೇದವು C.L. Bible (BSI)

29 ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ತಿದಿಯು (ಶ್ವಾಸಕೋಶ) ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ತಿದಿಯು ಬುಸುಬುಸುಗುಟ್ಟುತ್ತದೆ, ಸೀಸವು ಉರಿಯಿಂದ ಸುಟ್ಟುಹೋಗುತ್ತದೆ, ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ನಿಷ್ಪ್ರಯೋಜನ, ಕಲ್ಮಷವು ತೆಗೆಯಲ್ಪಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಕುಲುಮೆಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಪರಿಶ್ರಮವೆಲ್ಲ ವ್ಯರ್ಥ, ಕೆಟ್ಟವರಿಂದ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:29
12 ತಿಳಿವುಗಳ ಹೋಲಿಕೆ  

ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.


ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.


ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ : “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ !


ಇಂತೆಂದುಕೊಂಡೆ ನಾನಾಗ : ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.


ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು