Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:4 - ಕನ್ನಡ ಸತ್ಯವೇದವು C.L. Bible (BSI)

4 ಅವರು : “ಸಿಯೋನಿಗೆ ವಿರುದ್ಧ ಯುದ್ಧಸನ್ನದ್ಧರಾಗಿರಿ. ಏಳಿ, ನಡುಮಧ್ಯಾಹ್ನದಲ್ಲೆ ಅದರ ಮೇಲೆ ನುಗ್ಗುವ. ಅಯ್ಯೋ, ಇದೇನು ಹೊತ್ತುಮೀರಿ ಹೋಗುತ್ತಿದೆ ಅಲ್ಲಾ, ಸಂಜೆಯ ನೆರಳು ಉದ್ದುದ್ದವಾಗುತ್ತಿದೆಯಲ್ಲಾ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇವರು, ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ, ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು ಅನ್ನುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 [ಇವರು] - ಚೀಯೋನಿಗೆ ವಿರುದ್ಧವಾಗಿ ಸನ್ನದ್ಧರಾಗಿರಿ; ಏಳಿರಿ, ಮಧ್ಯಾಹ್ನಕ್ಕೆ ಅದರ ಮೇಲೆ ನುಗ್ಗುವ! ಅಯ್ಯೋ, ಇದೇನು! ನಮಗೆ ಹೊತ್ತು ತಿರುಗಿತಲ್ಲಾ, ಸಂಜೆಯ ನೆರಳುಗಳು ಉದ್ದವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಜೆರುಸಲೇಮಿನ ಮೇಲೆ ಧಾಳಿ ಮಾಡುವದಕ್ಕೆ ಸಿದ್ಧರಾಗಿರಿ. ಏಳಿರಿ, ನಾವು ನಗರವನ್ನು ಮಧ್ಯಾಹ್ನದಲ್ಲಿಯೇ ಮುತ್ತೋಣ. ಆದರೆ ಈಗಾಗಲೇ ಹೊತ್ತಾಗಿದೆ. ಸಾಯಂಕಾಲದ ನೆರಳುಗಳು ವಿಸ್ತಾರಗೊಳ್ಳುತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಚೀಯೋನಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ. ಏಳಿರಿ, ಮಧ್ಯಾಹ್ನದಲ್ಲಿ ದಾಳಿಮಾಡೋಣ. ನಮಗೆ ಕಷ್ಟ! ಏಕೆಂದರೆ ಹೊತ್ತು ಮುಳುಗುತ್ತದೆ; ಸಂಜೆಯ ನೆರಳುಗಳು ಉದ್ದವಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:4
14 ತಿಳಿವುಗಳ ಹೋಲಿಕೆ  

ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.


ಗಾಜಾಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು; ಅಷ್ಡೋದಿನ ನಿವಾಸಿಗಳನ್ನು ನಡುಮಧ್ಯಾಹ್ನದಲ್ಲೆ ಅಟ್ಟಿಸಿಬಿಡಲಾಗುವುದು; ಎಕ್ರೋನಿನ ಜನರನ್ನು ನಿರ್ಮೂಲಮಾಡಲಾಗುವುದು.


“ರಾಷ್ಟ್ರಗಳಿಗೆ ಹೀಗೆ ಪ್ರಕಟಿಸಿರಿ: ರಾಷ್ಟ್ರಗಳೇ, ಯುದ್ಧಸನ್ನದ್ಧರಾಗಿರಿ. ಶೂರರನ್ನು ಎಚ್ಚರಗೊಳಿಸಿರಿ; ಯೋಧರೆಲ್ಲರೂ ಒಟ್ಟುಗೂಡಲಿ; ಯುದ್ಧಕ್ಕೆ ಹೊರಡಲಿ.


ಜನರು : “ಸುಗ್ಗಿ ಮುಗಿಯಿತು, ಹಣ್ಣಿನಕಾಲ ಕಳೆಯಿತು. ನಮಗಾದರೊ ರಕ್ಷಣೆ ದೊರಕದೆಹೋಯಿತು.”


ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.


ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು