Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:5 - ಕನ್ನಡ ಸತ್ಯವೇದವು C.L. Bible (BSI)

5 ಎದ್ದು ರಾತ್ರಿಯಲ್ಲೆ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ,” ಎಂದುಕೊಳ್ಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ ಅಂದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎದ್ದು ರಾತ್ರಿಯಲ್ಲಿ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ [ಅಂದುಕೊಳ್ಳುವರು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಏಳಿರಿ, ನಾವು ರಾತ್ರಿಯಲ್ಲಿ ನಗರದ ಮೇಲೆ ಧಾಳಿ ಮಾಡೋಣ. ನಾವು ಜೆರುಸಲೇಮಿನ ಭದ್ರವಾದ ರಕ್ಷಣಾಸ್ಥಳಗಳನ್ನು ನಾಶಮಾಡೋಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಳಿರಿ, ರಾತ್ರಿಯಲ್ಲಿ ದಾಳಿಮಾಡೋಣ. ಅವಳ ಕೋಟೆಗಳನ್ನು ನಾಶಮಾಡೋಣ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:5
12 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.


ತೆರೆ, ಲೆಬನೋನೇ ನಿನ್ನ ಪುರದ್ವಾರಗಳನು ದಹಿಸಿಬಿಡಲಿ ಅಗ್ನಿ ನಿನ್ನ ದೇವದಾರುಗಳನು!


ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”


“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II


ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.


ಒಳಗಿದ್ದ ಎಲ್ಲ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು