Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:6 - ಕನ್ನಡ ಸತ್ಯವೇದವು C.L. Bible (BSI)

6 ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ : “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸೇನಾಧೀಶ್ವರನಾದ ಯೆಹೋವನು ಹೀಗೆ ಹೇಳಿದ್ದಾನೆ - ಸುತ್ತಣ ಮರಗಳನ್ನು ಕಡಿದುಬಿಡಿರಿ, ಯೆರೂಸಲೇವಿುನೆದುರಿಗೆ ದಿಬ್ಬ ಹಾಕಿರಿ; ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದೋಚಾಟವೇ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸರ್ವಶಕ್ತನಾದ ಯೆಹೋವನು ಹೀಗೆ ಹೇಳಿದನು: “ಜೆರುಸಲೇಮಿನ ಸುತ್ತಮುತ್ತಲಿನ ಮರಗಳನ್ನು ಕಡಿದುಹಾಕಿರಿ; ಜೆರುಸಲೇಮಿನ ಎದುರಿಗೆ ಒಂದು ದಿಬ್ಬ ನಿರ್ಮಿಸಿರಿ. ನಗರವನ್ನು ದಂಡಿಸಬೇಕು. ನಗರದ ಒಳಗಡೆ ದಬ್ಬಾಳಿಕೆಯ ಹೊರತು ಮತ್ತೇನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:6
15 ತಿಳಿವುಗಳ ಹೋಲಿಕೆ  

“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.


ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ,


“ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು - ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ.


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.


ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು:


ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಒಡ್ಡುಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತು.


ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.


ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.


ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ಧಿಕ್ಕಾರ!


ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?


“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.


ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.


ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು