Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 6:8 - ಕನ್ನಡ ಸತ್ಯವೇದವು C.L. Bible (BSI)

8 ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿವಾಸಿಗಳಿಲ್ಲದ ದೇಶವನ್ನಾಗಿ ಮಾಡದಂತೆ ಶಿಕ್ಷಣವನ್ನು ಹೊಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆರುಸಲೇಮ್ ನಗರವೇ, ಈ ಎಚ್ಚರಿಕೆಯ ನುಡಿಗಳನ್ನು ಕೇಳು. ನೀನು ಕೇಳದಿದ್ದರೆ ನಾನು ನಿನಗೆ ವಿಮುಖನಾಗುವೆ. ನಾನು ನಿನ್ನ ಪ್ರದೇಶವನ್ನು ಒಂದು ಮರಳುಗಾಡಾಗಿ ಮಾಡುತ್ತೇನೆ. ಅಲ್ಲಿ ಯಾರೂ ವಾಸಮಾಡಲು ಸಾಧ್ಯವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಓ ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ, ನಾನು ನಿಮ್ಮನ್ನು ಹಾಳಾಗಿಯೂ, ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತೆಗೆದುಕೋ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 6:8
23 ತಿಳಿವುಗಳ ಹೋಲಿಕೆ  

ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಇವಳು ಮುಚ್ಚುಮರೆಯಿಲ್ಲದೆ ಹಾದರಮಾಡಿ ತನ್ನ ಮಾನವನ್ನೇ ಕೆಡಿಸಿಕೊಂಡಾಗ ನನ್ನ ಅನುರಾಗ, ಮೊದಲು ಇವಳ ಅಕ್ಕನಿಂದ ದೂರವಾದ ಹಾಗೆ, ಇವಳಿಂದಲೂ ದೂರವಾಯಿತು.


ಅವರಾದರೋ ನನಗೆ ಕಿವಿಗೊಡಲಿಲ್ಲ. ಕೇಳಲಿಕ್ಕೂ ಕಲಿತುಕೊಳ್ಳಲಿಕ್ಕೂ ಅವರು ಒಪ್ಪಲಿಲ್ಲ.


ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”


ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.


ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II


ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?


ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ಎಂತಲೇ ವಿವೇಕಿಗಳಾಗಿರಿ, ರಾಜರುಗಳೇ, I ಬುದ್ಧಿವಾದಕೆ ಕಿವಿಗೊಡಿ, ದೇಶಾಧಿಪತಿಗಳೇ II


ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆಸೇರಿಸುವಾಗಲೆಲ್ಲಾ ನಿಮ್ಮ ನಾಡು ಹಾಳುಬಿದ್ದು, ತನಗೆ ಸಲ್ಲಬೇಕಾದ ಸಬ್ಬತ್ ಕಾಲವನ್ನು ಅನುಭವಿಸುವುದು. ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಸವಿಯುವುದು.


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.


ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು