Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನ ಹೆಸರು ಪಡೆದಿರುವ ಈ ದೇವಾಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ‘ನಾವು ಸುರಕ್ಷಿತರು’ ಎನ್ನುತ್ತೀರಿ. ಈ ಎಲ್ಲ ಅಸಹ್ಯಕಾರ್ಯಗಳನ್ನು ನಡೆಸುವುದಕ್ಕೋ ಈ ಸುರಕ್ಷತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು, ‘ನಮಗೆ ಪರಿಹಾರವಾಯಿತು’ ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡೆಸುವುದಕ್ಕೆ ಅವಕಾಶ ಮಾಡಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಹೆಸರುಗೊಂಡಿರುವ ಈ ಆಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ನಮಗೆ ಪರಿಹಾರವಾಯಿತು ಎಂದು ಹೇಳಿ ಈ ಎಲ್ಲಾ ಅಸಹ್ಯಕಾರ್ಯಗಳನ್ನು ಇನ್ನೂ ನಡಿಸುವದಕ್ಕೆ ಅವಕಾಶ ಮಾಡಿಕೊಳ್ಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನೀವು ಈ ಪಾಪಗಳನ್ನು ಮಾಡುತ್ತಿದ್ದರೂ ನನ್ನ ಹೆಸರಿನಿಂದ ಕರೆಯಲ್ಪಡುವ ಈ ಆಲಯದಲ್ಲಿ ನನ್ನ ಎದುರಿಗೆ ನಿಲ್ಲಬಹುದೆಂದು ಭಾವಿಸಿರುವಿರಾ? ನೀವು ನನ್ನ ಸಮ್ಮುಖದಲ್ಲಿ ನಿಂತುಕೊಂಡು, “ನಾವು ಸುರಕ್ಷಿತರಾಗಿದ್ದೇವೆ” ಎಂದು ಹೇಳಿಕೊಂಡು ನಿಮ್ಮ ದುಷ್ಕೃತ್ಯಗಳನ್ನು ಮುಂದುವರಿಸಬಹುದೆಂದು ಭಾವಿಸಿರುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:10
31 ತಿಳಿವುಗಳ ಹೋಲಿಕೆ  

ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.


ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರಮಾಡಿದರು; ಹೌದು, ನನ್ನ ಮಂದಿರದ ನಟ್ಟನಡುವೆ ಇದನ್ನು ನಡೆಸಿದರು.


ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ.


ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದಮಾಡಿಕೊಂಡಿರಿ.


ಸರ್ವೇಶ್ವರನ ನುಡಿ : “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.


ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.


ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.


ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.


“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.


ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.


“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.


ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.


ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;


ಸರ್ವೇಶ್ವರ ಜೆರುಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ


ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ


ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ನಿಮ್ಮ ಪೂರ್ವಜರು, ಜುದೇಯದ ಅರಸರು, ಅವರ ಪತ್ನಿಯರು, ನೀವು, ನಿಮ್ಮ ಹೆಂಡತಿಯರು, ಇವರೆಲ್ಲರು ಜುದೇಯದ ನಾಡಿನಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ನಡೆಸಿದ ದುರಾಚಾರಗಳನ್ನು ನೀವು ಮರೆತುಬಿಟ್ಟಿರೋ?


“ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?


ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.


ದರೋಡೆಗಾರರು ದಾರಿಹೋಕರಿಗಾಗಿ ಹೊಂಚುಹಾಕುವಂತೆ ಯಾಜಕರು ಗುಂಪುಗೂಡಿ ಹೊಂಚುಹಾಕುತ್ತಾ, ಶೆಖೆಮಿಗೆ ಯಾತ್ರೆಹೋಗುವವರನ್ನು ಕೊಂದುಹಾಕುತ್ತಾರೆ. ಅವರು ಮಾಡುವುದು ನಿಜಕ್ಕೂ ಘೋರಕೃತ್ಯ.


ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.


ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.


ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.


ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು