ಯೆರೆಮೀಯ 7:14 - ಕನ್ನಡ ಸತ್ಯವೇದವು C.L. Bible (BSI)14 ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆದಕಾರಣ ನನ್ನ ನಾಮಕ್ಕೆ ನೆಲೆಯಾದ ನಿಮ್ಮ ಭರವಸೆಗೆ ಆಧಾರವಾದ ಆಲಯಕ್ಕೂ, ನಾನು ನಿಮಗೂ ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಈ ಕೃತ್ಯಗಳನ್ನೆಲ್ಲಾ ನಡಿಸಿದ ಕಾರಣ ನನ್ನ ನಾಮಕ್ಕೆ ನೆಲೆಯಾಗಿ ನಿಮ್ಮ ಭರವಸಕ್ಕೆ ಆಧಾರವಾದ ಆಲಯಕ್ಕೂ ನಾನು ನಿಮಗೆ ಮತ್ತು ನಿಮ್ಮ ಪಿತೃಗಳಿಗೆ ದಯಪಾಲಿಸಿದ ಸ್ಥಳಕ್ಕೂ ಶೀಲೋವಿಗೆ ತಂದ ಗತಿಯನ್ನೇ ಈಗ ತರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದ್ದರಿಂದ ನನ್ನ ಹೆಸರನ್ನು ಹೊಂದಿರುವ ಆಲಯವನ್ನೂ ನೀವು ನಂಬಿರುವ ಆಲಯವನ್ನೂ ನಿಮ್ಮ ಪೂರ್ವಿಕರಿಗೆ ನಾನು ಕೊಟ್ಟಿರುವ ಸ್ಥಳವನ್ನೂ ನಾನು ಶೀಲೋವಿಗೆ ಮಾಡಿದಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು. ಅಧ್ಯಾಯವನ್ನು ನೋಡಿ |