Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:19 - ಕನ್ನಡ ಸತ್ಯವೇದವು C.L. Bible (BSI)

19 ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೆ?” ಎನ್ನುತ್ತಾರೆ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ನನಗೆ ಕೇಡುಮಾಡುತ್ತಾರೋ, ಅವಮಾನವು ತಮ್ಮ ಮುಖವನ್ನು ಮುಚ್ಚುವಷ್ಟರ ಮಟ್ಟಿಗೆ ತಮಗೇ ಕೇಡುಮಾಡಿಕೊಳ್ಳುತ್ತಾರಲ್ಲಾ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿಜವಾಗಿ ಹೇಳುವುದಾದರೆ, ಯೆಹೂದದ ಜನರು ನನಗೆ ಕೇಡುಮಾಡುತ್ತಿಲ್ಲ, ಅವರು ತಮಗೇ ಕೇಡುಮಾಡಿಕೊಳ್ಳುತ್ತಿದ್ದಾರೆ. ಅವರು ತಮಗೆ ನಾಚಿಕೆಯಾಗುವಂತೆ ಮಾಡುತ್ತಿದ್ದಾರೆ” ಎಂದು ಯೆಹೋವನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರು ಅನ್ನುತ್ತಾನೆ: “ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖ ಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೇ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:19
21 ತಿಳಿವುಗಳ ಹೋಲಿಕೆ  

ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.


ಸಿಯೋನಿನಿಂದ ಕೇಳಿಬಂದ ಪ್ರಲಾಪನೆ : “ಅಯ್ಯೋ ಹಾಳಾದೆವು, ನಮ್ಮ ಮಾನಮರ್ಯಾದೆ ಕಳೆದುಹೋಯಿತು ! ನಾವು ನಮ್ಮ ನಾಡನ್ನೇ ಬಿಟ್ಟು ತೊಲಗಬೇಕಾಗಿ ಬಂದಿತು. (ಶತ್ರುಗಳಿಂದ) ನಮ್ಮ ಮನೆಮಠಗಳು ನೆಲಸಮವಾದವು.”


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”


ಮೂರ್ತಿಗಳನು ಮಾಡುವವರೆಲ್ಲರು ಈಡಾಗುವರು ನಾಚಿಕೆಗೆ ಮಾನಭಂಗಪಟ್ಟು ಒಟ್ಟಿಗೆ ಮುಳುಗುವರವರು ಅವಮಾನದೊಳಗೆ.


ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.


ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”


ನೀನು ಪಾಪಮಾಡದಿದ್ದರೆ ದೇವರಿಗೇನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಿದರೆ ಅವರಿಗಾದ ನಷ್ಟವೇನು?


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.


ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”


ನಿನ್ನನ್ನು ಅಟ್ಟಿ ಮೇಯಿಸುವ ಕುರುಬರನ್ನು ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಮಿಂಡರನ್ನು ಸೆರೆಹಿಡಿದುಕೊಂಡು ಹೋಗುವರು. ಆಗ ಖಂಡಿತವಾಗಿ ನೀನು ಆಶಾಭಂಗಪಡುವೆ ನಿನ್ನ ದುಷ್ಕೃತ್ಯಗಳ ನಿಮಿತ್ತ ಅವಮಾನಕ್ಕೀಡಾಗುವೆ.


ಆದರೆ ಸರ್ವೇಶ್ವರ ಸ್ವಾಮಿಯೇ ಹೇಳುವಂತೆ ನೀವು ಅವರಿಗೆ ಕಿವಿಗೊಡದೆ ನಿಮ್ಮ ಕೈಕೃತಿಗಳಾದ ವಿಗ್ರಹಗಳಿಂದ ಅವರನ್ನು ಕೆಣಕಿ ನಿಮಗೇ ಕೇಡನ್ನು ತಂದುಕೊಂಡಿದ್ದೀರಿ.


ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.


ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಈಜಿಪ್ಟರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ಕೆರಳಿಸಿರುವೆ.


ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು