Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:21 - ಕನ್ನಡ ಸತ್ಯವೇದವು C.L. Bible (BSI)

21 ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: “ನೀವು ಅರ್ಪಿಸುವ ದಹನಬಲಿಗಳನ್ನು, ಸಾಧಾರಣ ಯಜ್ಞಬಲಿಗಳೆಂದು ಭಾವಿಸಿ ಅವುಗಳ ಮಾಂಸವನ್ನು ಕೂಡ ನೀವೇ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, “ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು ಸಾಧಾರಣ ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ಅರ್ಪಿಸುವ ಸರ್ವಾಂಗಹೋಮಗಳನ್ನು [ಸಾಧಾರಣ] ಯಜ್ಞಗಳೆಂದು ಭಾವಿಸಿ ಅವುಗಳ ಮಾಂಸವನ್ನೂ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸರ್ವಶಕ್ತನೂ ಇಸ್ರೇಲಿನ ದೇವರೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ಹೋಗಿರಿ, ನಿಮ್ಮ ಮನಸ್ಸಿಗೆ ಬಂದಷ್ಟು ಸರ್ವಾಂಗಹೋಮಗಳನ್ನು ಮತ್ತು ಯಜ್ಞಗಳನ್ನು ಅರ್ಪಿಸಿರಿ. ಆ ಯಜ್ಞಗಳ ಮಾಂಸವನ್ನು ನೀವೇ ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:21
9 ತಿಳಿವುಗಳ ಹೋಲಿಕೆ  

ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.


ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.


ಕುರಿಮೇಕೆಗಳನ್ನು ನೀನು ತರಲಿಲ್ಲ ನನಗೆ ಹೋಮಕ್ಕಾಗಿ ಬಲಿಗಳನ್ನು ಅರ್ಪಿಸಲಿಲ್ಲ ನನ್ನ ಘನತೆಗಾಗಿ ನಾ ನಿನ್ನನು ಒತ್ತಾಯಿಸಲಿಲ್ಲ ನೈವೇದ್ಯಕ್ಕಾಗಿ ನಾ ನಿನ್ನನು ಬೇಸರಗೊಳಿಸಲಿಲ್ಲ ಧೂಪಾರತಿಗಾಗಿ.


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


“ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?


ದಹನಬಲಿಗಳನ್ನು ಸಮರ್ಪಿಸುವಾಗ ರಕ್ತಮಾಂಸಗಳೆರಡನ್ನೂ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದಲ್ಲಿ ದಹಿಸಿಬಿಡಬೇಕು. ಮಿಕ್ಕಬಲಿಗಳನ್ನು ಅರ್ಪಿಸುವಾಗ ರಕ್ತವನ್ನು ಸರ್ವೇಶ್ವರನ ಬಲಿಪೀಠದ ಮೇಲೆ ಸುರಿದುಬಿಟ್ಟು, ಮಾಂಸವನ್ನು ಊಟಮಾಡಬೇಕು.


ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು