ಯೆರೆಮೀಯ 7:25 - ಕನ್ನಡ ಸತ್ಯವೇದವು C.L. Bible (BSI)25 ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ನಿಮ್ಮ ಪೂರ್ವಿಕರು ಐಗುಪ್ತ ದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ತಡ ಮಾಡದೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನಿಮ್ಮ ಪಿತೃಗಳು ಐಗುಪ್ತದೇಶದೊಳಗಿಂದ ಹೊರಟ ದಿನ ಮೊದಲುಗೊಂಡು ಈ ದಿನದವರೆಗೂ ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮವರ ಬಳಿಗೆ ಕಳುಹಿಸುತ್ತಾ ಬಂದಿದ್ದೇನೆ, ದಿನ ದಿನವೂ ಸಾವಕಾಶ ಮಾಡದೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ನಿಮ್ಮ ಪೂರ್ವಿಕರು ಈಜಿಪ್ಟನ್ನು ಬಿಟ್ಟ ದಿನದಿಂದ ಇಂದಿನವರೆಗೂ ನಾನು ನಿಮ್ಮಲ್ಲಿಗೆ ನನ್ನ ಸೇವಕರನ್ನು ಕಳುಹಿಸಿದ್ದೇನೆ. ನನ್ನ ಸೇವಕರು ಪ್ರವಾದಿಗಳಾಗಿದ್ದಾರೆ. ನಾನು ಅವರನ್ನು ಮತ್ತೆಮತ್ತೆ ನಿಮ್ಮಲ್ಲಿಗೆ ಕಳುಹಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ನಿಮ್ಮ ಪಿತೃಗಳು ಈಜಿಪ್ಟ್ ದೇಶವನ್ನು ಬಿಟ್ಟುಹೋದ ದಿನದಿಂದ ಇಂದಿನವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ಪ್ರತಿದಿನವೂ ನಿಮ್ಮ ಬಳಿಗೆ ಕಳುಹಿಸುತ್ತಾ ಬಂದೆನು. ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.