ಯೆರೆಮೀಯ 7:26 - ಕನ್ನಡ ಸತ್ಯವೇದವು C.L. Bible (BSI)26 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’ ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.