Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:27 - ಕನ್ನಡ ಸತ್ಯವೇದವು C.L. Bible (BSI)

27 “ಯೆರೆಮೀಯನೇ, ನೀನು ಈ ಮಾತುಗಳನ್ನು ಅವರಿಗೆ ಹೇಳಿದರೂ ಅವರು ಕಿವಿಗೊಡುವುದಿಲ್ಲ, ಕರೆದರೂ ಅವರು ಓಗೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವುದಿಲ್ಲ, ಕರೆಯುವಾಗ ಉತ್ತರಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನೀನು ಈ ಮಾತುಗಳನ್ನೆಲ್ಲಾ ಹೇಳುವಾಗ ಅವರು ಕಿವಿಗೊಡುವದಿಲ್ಲ, ಕರೆಯುವಾಗ ಉತ್ತರಕೊಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಯೆರೆಮೀಯನೇ, ನೀನು ಈ ಸಂಗತಿಗಳನ್ನು ಯೆಹೂದದ ಜನರಿಗೆ ಹೇಳು. ಆದರೆ ಅವರು ನಿನ್ನ ಮಾತುಗಳನ್ನು ಕೇಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ಆದ್ದರಿಂದ ನೀನು ಈ ಮಾತುಗಳನ್ನೆಲ್ಲಾ ಅವರಿಗೆ ಹೇಳಬೇಕು. ಆದರೆ ಅವರು ನಿನ್ನ ಮಾತನ್ನು ಕೇಳುವುದಿಲ್ಲ. ಅವರನ್ನು ನೀನು ಕರೆಯುವೆ. ಆದರೆ ಅವರು ನಿನಗೆ ಉತ್ತರ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:27
11 ತಿಳಿವುಗಳ ಹೋಲಿಕೆ  

ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.


ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.


ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ".


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು