Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:3 - ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ : “ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದುಕೊಳ್ಳಿ. ಹಾಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗೆನ್ನುತ್ತಾನೆ, ನೀವು ನಿಮ್ಮ ನಡತೆಯನ್ನೂ, ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ; ಹೀಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಇಸ್ರೇಲರ ದೇವರು. ಸರ್ವಶಕ್ತನಾದ ದೇವರು ಹೀಗೆ ಹೇಳುತ್ತಾನೆ: ನಿಮ್ಮ ನಡತೆಯನ್ನು ಬದಲಾಯಿಸಿರಿ; ಒಳ್ಳೆಯದನ್ನು ಮಾಡಿರಿ. ಆಗ ನೀವು ಇಲ್ಲಿರಲು ಆಸ್ಪದ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:3
18 ತಿಳಿವುಗಳ ಹೋಲಿಕೆ  

ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ : ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.


ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.


ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.


ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು.


ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು