Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:33 - ಕನ್ನಡ ಸತ್ಯವೇದವು C.L. Bible (BSI)

33 ಈ ಜನರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು. ಅವುಗಳನ್ನು ಬೆದರಿಸಿ ಓಡಿಸಲು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಈ ಜನರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆಗ ಸತ್ತವರ ದೇಹಗಳು ಭೂಮಿಯ ಮೇಲೆ ಬಿದ್ದಿರುತ್ತವೆ; ಅವು ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ಕಾಡುಪ್ರಾಣಿಗಳಿಗೂ ಆಹಾರವಾಗುತ್ತವೆ. ಆ ಪಕ್ಷಿಗಳನ್ನು ಮತ್ತು ಪ್ರಾಣಿಗಳನ್ನು ಓಡಿಸುವದಕ್ಕೆ ಒಬ್ಬನಾದರೂ ಜೀವಂತವಾಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:33
19 ತಿಳಿವುಗಳ ಹೋಲಿಕೆ  

ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.


ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು; ಅವುಗಳನ್ನು ಬೆದರಿಸಿ ಓಡಿಸುವುದಕ್ಕೂ ಯಾರೂ ಇರುವುದಿಲ್ಲ.


ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.


ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು.


ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.


ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.”


ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು.


ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”


“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು : ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.


ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದರೆ, ಅವರಿಂದ ನಿಮ್ಮ ಮುಂದೆಯೇ ನಾಶವಾಗಿಹೋಗುವ ಅನ್ಯಜನಾಂಗಗಳಂತೆ ನೀವೂ ನಾಶವಾಗಿಹೋಗುವಿರಿ.


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು