Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 7:34 - ಕನ್ನಡ ಸತ್ಯವೇದವು C.L. Bible (BSI)

34 ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೆಹೂದದ ಪಟ್ಟಣಗಳಲ್ಲಿಯೂ ಮತ್ತು ಯೆರೂಸಲೇಮಿನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ, ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವುದು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇವಿುನ ಬೀದಿಗಳಲ್ಲಿಯೂ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ನಿಲ್ಲಿಸಿಬಿಡುವೆನು, ದೇಶವು ಹಾಳೇ ಹಾಳಾಗುವದು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 7:34
23 ತಿಳಿವುಗಳ ಹೋಲಿಕೆ  

“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.


ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.


ಇವುಗಳಲ್ಲಿ ಸಂಭ್ರಮ ಸಡಗರಗಳ ಧ್ವನಿಯಾಗಲಿ. ವಧುವರರ ಸ್ವರವಾಗಲಿ ಏಳದಂತೆ ಮಾಡುವೆನು. ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.


ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು : ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು.


ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.


ಸರ್ವೇಶ್ವರ ಸ್ವಾಮಿ ಹೀಗೆಂದಿದ್ದಾರೆ : ನಾಡೆಲ್ಲ ಬಟ್ಟಬರಿದಾಗುವುದು; ಆದರೆ ನಾನು ಅದನ್ನು ಸಂಪೂರ್ಣವಾಗಿ ಲಯಮಾಡುವುದಿಲ್ಲ.


ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.


ಸರ್ವೇಶ್ವರ ಹೀಗೆನ್ನುತ್ತಾರೆ: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಪಾಳುಬಿದ್ದ ಸ್ಥಳವೆಂದು ನೀವು ಕರೆಯುವ ಈ ಸ್ಥಳದಲ್ಲೇ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಜುದೇಯದ ಊರುಗಳಲ್ಲೇ, ಜೆರುಸಲೇಮಿನ ಬೀದಿಗಳಲ್ಲೇ


ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ :


ಆಹುತಿಯಾದರವರ ಯುವಜನ ಅಗ್ನಿಗೆ I ವಿವಾಹವಾಗಲಿಲ್ಲ ಅವರ ಕನ್ಯೆಯರಿಗೆ II


ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ : “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ , ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.


ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?


ಆದಕಾರಣ, ನನ್ನ ರೌದ್ರಕೋಪಾಗ್ನಿ ಸುರಿದು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಧಗಧಗಿಸಿತು. ಅವು ಈಗಲೂ ಹಾಳುಪಾಳಾಗಿವೆ.’


ಮುದುಕರು ಇನ್ನು ಕೂರುತ್ತಿಲ್ಲ ಚಾವಡಿಗಳಲಿ ಯುವಕರು ಇನ್ನು ಹಿಡಿಯುತ್ತಿಲ್ಲ ವಾದ್ಯಗಳನ್ನು ಕೈಯಲ್ಲಿ.


ಆ ಇರುಳು ಬರಡಾಗಲಿ ಸಂತಸದ ದನಿ ಅದರಲಿ ಕೇಳದಿರಲಿ.


ಇನ್ನೂ ನೋಡಿದೆ - ಸೊಂಪಾದ ನಾಡು ಈಗ ಸುಡುಗಾಡು ಅಕಟಾ ! ಸರ್ವೇಶ್ವರನ ಮುಂದೆ, ಅವರ ಕೋಪಾಗ್ನಿಯ ಮುಂದೆ ಊರುಗಳೆಲ್ಲವು ಪಾಳುಬಿದ್ದಿದ್ದವು.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.


ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.


ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು