ಯೆರೆಮೀಯ 7:7 - ಕನ್ನಡ ಸತ್ಯವೇದವು C.L. Bible (BSI)7 ಆಗ ನಾನು ನಿಮ್ಮನ್ನು ಈ ಸ್ಥಳದಲ್ಲೆ ನೆಲೆಗೊಳಿಸುವೆನು. ನಿಮ್ಮ ಪೂರ್ವಜರಿಗೆ ನಾನು ಶಾಶ್ವತವಾಗಿ ದಯಪಾಲಿಸಿದ ಈ ನಾಡಿನಲ್ಲೆ ನೆಲೆಗೊಳಿಸುವೆನು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪೂರ್ವಿಕರಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಾನು ನಿಮ್ಮನ್ನು ಈ ಸ್ಥಳದಲ್ಲಿ, ನಾನೇ ನಿಮ್ಮ ಪಿತೃಗಳಿಗೆ ಶಾಶ್ವತವಾಗಿ ದಯಪಾಲಿಸಿದ ಈ ದೇಶದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನೀವು ನನ್ನ ಆಜ್ಞೆಯನ್ನು ಪಾಲಿಸಿದರೆ ಇಲ್ಲಿರಲು ನಾನು ನಿಮಗೆ ಆಸ್ಪದ ಕೊಡುತ್ತೇನೆ. ನಾನು ಈ ಪ್ರದೇಶವನ್ನು ನಿಮ್ಮ ಪೂರ್ವಿಕರಿಗೆ ಶಾಶ್ವತವಾದ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು. ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.