ಯೆರೆಮೀಯ 8:1 - ಕನ್ನಡ ಸತ್ಯವೇದವು C.L. Bible (BSI)1 “ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಹೀಗೆನ್ನುತ್ತಾನೆ, “ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇಮಿನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಸಮಾಧಿಗಳೊಳಗಿಂದ ತೆಗೆದುಬಿಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಹೀಗನ್ನುತ್ತಾನೆ - ಆ ಕಾಲದಲ್ಲಿ ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಯೆರೂಸಲೇವಿುನ ನಿವಾಸಿಗಳು, ಇವರೆಲ್ಲರ ಎಲುಬುಗಳನ್ನು ಗೋರಿಗಳೊಳಗಿಂದ ತೆಗೆದು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಹೀಗೆನ್ನುತ್ತಾನೆ: “ಆಗ ಜನರು ಯೆಹೂದದ ರಾಜರ ಮತ್ತು ಪ್ರಮುಖ ಅಧಿಪತಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಯಾಜಕರ ಮತ್ತು ಪ್ರವಾದಿಗಳ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅವರು ಜೆರುಸಲೇಮಿನ ಎಲ್ಲಾ ಜನರ ಎಲುಬುಗಳನ್ನು ಅವರ ಗೋರಿಗಳಿಂದ ಹೊರತೆಗೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು. ಅಧ್ಯಾಯವನ್ನು ನೋಡಿ |