Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:10 - ಕನ್ನಡ ಸತ್ಯವೇದವು C.L. Bible (BSI)

10 ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರ ಜ್ಞಾನವು ಎಷ್ಟರದು? ಆದದರಿಂದ ನಾನು ಇವರ ಹೆಂಡರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರವಿುಸುವವರಿಗೂ ಕೊಟ್ಟುಬಿಡುವೆನು; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:10
28 ತಿಳಿವುಗಳ ಹೋಲಿಕೆ  

ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.


ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.


ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”


ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.


ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ಅದರ ಅರಸರು, ಮಂತ್ರಿಗಳು, ಯಾಜಕರು, ಪ್ರವಾದಿಗಳು, ಜುದೇಯದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು, ಹೀಗೆ ಎಲ್ಲ ಇಸ್ರಯೇಲರೂ ಯೆಹೂದ್ಯರೂ ಅಧರ್ಮವನ್ನು ಹೇರಳವಾಗಿಮಾಡಿ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ಈ ನಗರವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂದಿದೆ.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ನನ್ನ ಸತಿ ಮತ್ತೊಬ್ಬನಿಗೆ ಧಾನ್ಯಬೀಸುವ ದಾಸಿಯಾಗಲಿ ಅಂಥ ನನ್ನ ಸತಿಯೊಡನೆ ಇತರರು ಸಂಗಮಿಸಲಿ.


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”


ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”


ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.


ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು.


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು