Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:12 - ಕನ್ನಡ ಸತ್ಯವೇದವು C.L. Bible (BSI)

12 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ; ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇಹೋಗುವರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:12
20 ತಿಳಿವುಗಳ ಹೋಲಿಕೆ  

ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು !


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.


ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!


ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.


ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:


ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ , ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ.


ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.


ಅವರು ಇಂದಿನವರೆಗೂ ಪಶ್ಚಾತ್ತಾಪಪಡಲಿಲ್ಲ. ನನಗೆ ಭಯಪಡಲಿಲ್ಲ. ನಿಮಗೂ ನಿಮ್ಮ ಪೂರ್ವಜರಿಗೂ ನಾನು ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲಿಲ್ಲ.”


ಇವಳು ಮುಚ್ಚುಮರೆಯಿಲ್ಲದೆ ಹಾದರಮಾಡಿ ತನ್ನ ಮಾನವನ್ನೇ ಕೆಡಿಸಿಕೊಂಡಾಗ ನನ್ನ ಅನುರಾಗ, ಮೊದಲು ಇವಳ ಅಕ್ಕನಿಂದ ದೂರವಾದ ಹಾಗೆ, ಇವಳಿಂದಲೂ ದೂರವಾಯಿತು.


ಮಾರನೆಯ ದಿನ ಹಿರಿಯಳು ಕಿರಿಯಳಿಗೆ, “ನಿನ್ನೆ ರಾತ್ರಿ ನಾನು ಅಪ್ಪನ ಸಂಗಡ ಮಲಗಿದ್ದೆ. ಈ ರಾತ್ರಿ ಕೂಡ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೊ; ಹೀಗಾದರೂ ನಮ್ಮ ತಂದೆಯ ಸಂತಾನ ಉಳಿಸೋಣ”, ಎಂದು ಹೇಳಿದಳು.


ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.


ಕತ್ತಲೊಳು ಜಾರಿಬೀಳುವ ಇಳುಮೇಡು ಅವರ ಮಾರ್ಗ ತಳ್ಳಲ್ಪಡುವರು, ಅಂಧಕಾರದೊಳು ಬಿದ್ದುಹೋಗುವರು ಕೇಡನ್ನು ಅವರ ಮೇಲೆ ಬರಮಾಡುವೆನು ವಿಚಾರಣೆ ವರುಷದ ಕೇಡನ್ನು ಬರಮಾಡುವೆನು ಸರ್ವೇಶ್ವರನ ನುಡಿ ಇದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು