Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:13 - ಕನ್ನಡ ಸತ್ಯವೇದವು C.L. Bible (BSI)

13 “ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಇವರನ್ನು ಸಂಪೂರ್ಣವಾಗಿ ನಿರ್ಮೂಲ ಮಾಡಿಬಿಡುವೆನು. ದ್ರಾಕ್ಷಿಯ ಬಳ್ಳಿಯಲ್ಲಿಯೂ, ಅಂಜೂರದ ಮರದಲ್ಲಿಯೂ ಹಣ್ಣಿರುವುದಿಲ್ಲ, ಎಲೆಯು ಬಾಡುವುದು; ನಾನು ಹಾಳುಮಾಡುವವರನ್ನು ಅವರಿಗೆ ನೇಮಿಸುವೆನು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಇವರನ್ನು ನಿರ್ಮೂಲಮಾಡಿ ಕೊಚ್ಚಿಬಿಡುವೆನು; ದ್ರಾಕ್ಷೆಯ ಬಳ್ಳಿಯಲ್ಲಿಯೂ ಅಂಜೂರದ ಮರದಲ್ಲಿಯೂ ಹಣ್ಣಿರುವದಿಲ್ಲ, ಎಲೆಯು ಬಾಡುವದು; ನಾನು ಹಾಳು ಮಾಡುವವರನ್ನು ಅವರಿಗೆ ನೇವಿುಸುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:13
25 ತಿಳಿವುಗಳ ಹೋಲಿಕೆ  

ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.


ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿದೆ; ನನ್ನ ಅಂಜೂರದ ಗಿಡವನ್ನು ಸೀಳಿಹಾಕಿದೆ; ಅದರ ತೊಗಟೆಗಳನ್ನು ಸುಲಿದು ಬಿಸಾಡಿಬಿಟ್ಟಿದೆ; ಅದರ ರೆಂಬೆಗಳು ಬಿಳಿಚಿಕೊಂಡಿವೆ.


ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.


ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.”


ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.


ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಎಂಟು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ನೂರೆಂಬತ್ತು ಲೀಟರ್ ಬೀಜಬಿತ್ತಿದರೆ, ಕೇವಲ ಹದಿನೆಂಟು ಲೀಟರ್ ಧಾನ್ಯ ಮಾತ್ರ ಸಿಗುವುದು.


ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.


“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”


ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.


‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.


ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.


ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”


“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು