Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:15 - ಕನ್ನಡ ಸತ್ಯವೇದವು C.L. Bible (BSI)

15 ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನ್ನು ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:15
9 ತಿಳಿವುಗಳ ಹೋಲಿಕೆ  

“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.


ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.


ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.


ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.


ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.


ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು.


ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.


ಸಂಕಟ ಸಂಭವಿಸುವುದು; ಅಲ್ಪಸ್ವಲ್ಪ ಸಮಾಧಾನವನ್ನು ಹುಡುಕಿದರೂ ಸಿಕ್ಕದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು