Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:16 - ಕನ್ನಡ ಸತ್ಯವೇದವು C.L. Bible (BSI)

16 ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು ! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು !”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ವೈರಿಯ ಕುದುರೆಗಳ ಬುಸುಗಾಟವು ದಾನನಿಂದ ಕೇಳಿಬರುತ್ತದೆ; ತುರಂಗಗಳ (ಯುದ್ಧದ ಕುದುರೆ) ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ. ಶತ್ರುಗಳು ಬಂದರು, ಸೀಮೆಯನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ, ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ವೈರಿಯ ಕುದುರೆಗಳ ಬುಸುಗಾಟವು ದಾನಿನಿಂದ ಕೇಳಬರುತ್ತದೆ; ತುರಂಗಗಳ ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ; ಶತ್ರುಗಳು ಬಂದರು, ಸೀಮೆಯನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾನ್‌ಕುಲದವರ ಪ್ರದೇಶದಿಂದ ನಾವು ಶತ್ರುಗಳ ಕುದುರೆಗಳ ಕೆನೆತವನ್ನು ಕೇಳುತ್ತಿದ್ದೇವೆ. ಅವುಗಳ ಪಾದಗಳ ಬಡಿತದಿಂದ ಭೂಮಿ ನಡುಗುತ್ತಿದೆ. ಅವರು ನಮ್ಮ ಪ್ರದೇಶವನ್ನು ಮತ್ತು ಅಲ್ಲಿದ್ದ ಎಲ್ಲವನ್ನು ಹಾಳುಮಾಡಲು ಬಂದಿದ್ದಾರೆ. ಅವರು ನಗರವನ್ನು ಮತ್ತು ಅಲ್ಲಿದ್ದ ಎಲ್ಲಾ ಜನರನ್ನು ಹಾಳುಮಾಡಲು ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:16
22 ತಿಳಿವುಗಳ ಹೋಲಿಕೆ  

ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.


ನೆಲ ಕಂಪಿಸಿತು ಕುದುರೆಗಳ ಭರದೌಡಿನಿಂದ ಸುತ್ತಿಗೆಯಂತಹ ಆ ಕಾಲುಗಳ ಪೆಟ್ಟಿನಿಂದ


ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.


ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ಕೇಳಿ, ಚಕ್ರಗಳ‍ ಚೀತ್ಕಾರ, ಚಾಟಿಗಳ ಚಟಪಟ; ಕುದುರೆಗಳ ಭರದೌಡು, ರಥಗಳ ಹಾರಾಟ.


ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.


ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.


ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”


ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.


ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II


ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.


ಮಿಡತೆಯ ಹಾಗೆ ಅದು ಜಿಗಿಯಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭೀತಿಯನು ತರುತ್ತದೆ, ನೋಡು!


ನಾವು ಚಿಕ್ಕಂದಿನಿಂದ ನೋಡಿರುವಂತೆ ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಬಾಳ್ ದೇವತೆ ಕಬಳಿಸುತ್ತಾ ಬಂದಿದೆ.


ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.


“ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.


ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.


ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.


ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.


ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು