Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:18 - ಕನ್ನಡ ಸತ್ಯವೇದವು C.L. Bible (BSI)

18 ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅಯ್ಯೋ, ನನ್ನ ದುಃಖಕ್ಕೆ ಕೊನೆಯಿಲ್ಲವೇ? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅಯ್ಯೋ, ನನ್ನ ದುಃಖಕ್ಕೆ ಬೆಳಗೆಂದಿಗಾದೀತು? ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:18
12 ತಿಳಿವುಗಳ ಹೋಲಿಕೆ  

ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


ಜೆರುಸಲೇಮಿನ ಜನರು : “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.


“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಪ್ರವಾದಿಗಳ ವಿಷಯ : ನನ್ನ ಗುಂಡಿಗೆ ಒಡೆದುಹೋಗಿದೆ ನನ್ನೆಲುಬುಗಳು ನಡುನಡುಗುತ್ತಿವೆ ಸರ್ವೇಶ್ವರನಿಗೆ, ಆತನ ಪವಿತ್ರವಾಕ್ಯಕ್ಕೆ ಪರವಶನಾದ ನಾನು ಅಮಲೇರಿದಂತವನಾದೆ. ಹೌದು, ಮದ್ಯಪಾನಕ್ಕೆ ಸೋತ ಮನುಷ್ಯನಂತಾದೆ.


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು