Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:3 - ಕನ್ನಡ ಸತ್ಯವೇದವು C.L. Bible (BSI)

3 ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:3
22 ತಿಳಿವುಗಳ ಹೋಲಿಕೆ  

ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.


ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”


ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


ನಿಮ್ಮಲ್ಲಿ ಯಾರಾದರು ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟಿದ್ದರೂ ಅಲ್ಲಿಂದ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ಕರೆದುತರುವರು.


“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;


ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು.


ಅವನು ಬಾಬಿಲೋನಿನಲ್ಲಿರುವ ನಮಗೆ ಪತ್ರ ಕಳಿಸಿ, ‘ಪರದೇಶವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ತಿಳಿಸಿದ್ದಾನೆ.”


ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.


ಸರ್ವಶಕ್ತರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಇಸ್ರಯೇಲಿನ ಅಳಿದುಳಿದವರನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯ್ದುಕೊ. ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನಿನ್ನ ಕೈಯನ್ನು ಮತ್ತೆ ರೆಂಬೆಗಳಿಗೆ ಹಾಕು.”


ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:


ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನಾನು ಜೆರುಸಲೇಮಿಗು ಹಾಗುಜುದೇಯದ ಎಲ್ಲ ಊರುಗಳಿಗು ಬರಮಾಡಿದ ಕೇಡನ್ನು ನೀವೇ ನೋಡಿದ್ದೀರಿ.


ಆದಕಾರಣ, ನನ್ನ ರೌದ್ರಕೋಪಾಗ್ನಿ ಸುರಿದು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಧಗಧಗಿಸಿತು. ಅವು ಈಗಲೂ ಹಾಳುಪಾಳಾಗಿವೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು