Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:6 - ಕನ್ನಡ ಸತ್ಯವೇದವು C.L. Bible (BSI)

6 ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತನಾಡಿಕೊಳ್ಳುತ್ತಿರಲಿಲ್ಲ; ಯಾರು ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು ‘ಆಹಾ, ನಾನು ಎಂಥಾ ಕೆಲಸ ಮಾಡಿದೆ’ ಎಂದುಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೆ ತ್ವರೆಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಕಿವಿಗೊಟ್ಟು ಕೇಳುವಾಗ ಅವರು ಯಥಾರ್ಥವಾಗಿ ಮಾತಾಡಿಕೊಳ್ಳುತ್ತಿರಲಿಲ್ಲ; ಯಾವನೂ ತನ್ನ ಅಧರ್ಮದ ವಿಷಯವಾಗಿ ಪಶ್ಚಾತ್ತಾಪಪಟ್ಟು - ಆಹಾ, ನಾನು ಎಂಥಾ ಕೆಲಸ ಮಾಡಿದೆ ಎಂದು ಕೊಳ್ಳುತ್ತಿರಲಿಲ್ಲ; ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಯಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗಕ್ಕೇ ತ್ವರೆಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಎಚ್ಚರವಹಿಸಿ ಅವರು ಹೇಳುವದನ್ನು ಕೇಳಿದ್ದೇನೆ. ಆದರೆ ಅವರು ಸರಿಯಾದುದನ್ನು ಹೇಳುವದಿಲ್ಲ. ತಾವು ಮಾಡಿದ ಪಾಪಕ್ಕಾಗಿ ಅವರು ಪಶ್ಚಾತ್ತಾಪಪಡುವದಿಲ್ಲ. ಅವರು ಮಾಡಿದ ದುಷ್ಕೃತ್ಯದ ಬಗ್ಗೆ ಅವರು ಯೋಚಿಸುವದಿಲ್ಲ. ಜನರು ವಿಚಾರ ಮಾಡದೆ ಕೆಲಸಮಾಡುತ್ತಾರೆ. ಅವರು ಯುದ್ಧದಲ್ಲಿ ಓಡುವ ಕುದುರೆಯಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:6
24 ತಿಳಿವುಗಳ ಹೋಲಿಕೆ  

ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II


ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.


ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.


ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.


ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.


ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.


ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.


ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.


ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ಅಂಥ ಮನುಷ್ಯನು ದೇವರಿಗೆ: ‘ಪ್ರಾಯಶ್ಚಿತ್ತ ಮಾಡಿರುವೆ, ಇನ್ನು ಮುಂದೆ ಪಾಪಮಾಡೆ.


ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ,


ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.


ನಿತ್ಯಕ್ಕೂ ಕೋಪ ಮಾಡಬೇಡಿ; ಕೊನೆಯತನಕ ಸಿಟ್ಟುಗೊಳ್ಳಬೇಡಿ’ ಎಂದು ಕೋರುತ್ತಿರುವೆ. ಹೀಗಲ್ಲ ನೀನು ಹೇಳುತ್ತಿರುವೆಯಾದರೂ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿ ಕೃತಾರ್ಥಳಾಗಿರುವೆ!”


ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.


ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು