Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 8:9 - ಕನ್ನಡ ಸತ್ಯವೇದವು C.L. Bible (BSI)

9 ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಜ್ಞಾನಿಗಳು ಆಶಾಭಂಗಪಟ್ಟು ಬೆಬ್ಬರಬಿದ್ದು ಸಿಕ್ಕಿಕೊಂಡಿದ್ದಾರೆ; ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ “ಜ್ಞಾನಿಗಳು” ಯೆಹೋವನ ಉಪದೇಶವನ್ನು ಕೇಳಲು ಒಪ್ಪಲಿಲ್ಲ. ಆದ್ದರಿಂದ ಅವರು ನಿಜವಾದ ಜ್ಞಾನಿಗಳಲ್ಲವೇ ಅಲ್ಲ. ಆ “ಜ್ಞಾನಿಗಳು” ಸಿಕ್ಕಿಹಾಕಿಕೊಂಡಿದ್ದಾರೆ. ಅವರು ಗಾಬರಿಪಟ್ಟಿದ್ದಾರೆ ಮತ್ತು ನಾಚಿಕೆಪಟ್ಟಿದ್ದಾರೆ. ಅವರ ಜ್ಞಾನವು ಅಪ್ರಯೋಜಕವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 8:9
21 ತಿಳಿವುಗಳ ಹೋಲಿಕೆ  

ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.


ಭಂಗಪಡಿಸುತ್ತಾನೆ ವಂಚಕರ ಉಪಾಯಗಳನು ಕೈಗೂಡಗೊಳಿಸನು ಅವರ ಪ್ರಯತ್ನಗಳನು.


ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.


“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.


ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು".


ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.


ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ಆ ದಿನದಲ್ಲಿ ಯಾವ ಪ್ರವಾದಿಯೂ ತನಗಾಗಿರಬಹುದಾದ ದರ್ಶನಗಳನ್ನು ಪ್ರಕಟಿಸಲು ಹೆಮ್ಮೆಪಡುವುದಿಲ್ಲ. ಪ್ರವಾದಿಯಂತೆ ನಟಿಸುವುದಿಲ್ಲ. ಪ್ರವಾದಿಯ ವೇಷವನ್ನು ಧರಿಸುವುದಿಲ್ಲ.


ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.


ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು