ಯೆರೆಮೀಯ 9:1 - ಕನ್ನಡ ಸತ್ಯವೇದವು C.L. Bible (BSI)1 ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿವಿುತ್ತ ಹಗಲಿರುಳೂ ಅಳಬೇಕಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು. ಅಧ್ಯಾಯವನ್ನು ನೋಡಿ |