Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:14 - ಕನ್ನಡ ಸತ್ಯವೇದವು C.L. Bible (BSI)

14 ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸ್ವಂತ ಹೃದಯದ ಹಟದಂತೆ ನಡೆದು ತಮ್ಮ ಪಿತೃಗಳು ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದ್ದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:14
21 ತಿಳಿವುಗಳ ಹೋಲಿಕೆ  

ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.


ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.


ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.


ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.


ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”


ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.


ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.


ಇಂಥ ಯೋಚನೆ ಈ ಕಳ್ಳ ಪ್ರವಾದಿಗಳ ಮನದಲ್ಲಿ ಎಲ್ಲಿಯವರೆಗೆ ಇರುವುದು? ಕನಸು ಕಂಡ ಪ್ರವಾದಿ ತನ್ನ ಕನಸನ್ನು ಬೇಕಾದರೆ ತಿಳಿಸಲಿ.


ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.


ನನಗೆ ಉಸಿರಾಡಲೂ ಬಿಡದೆ ನನ್ನ ಹೊಟ್ಟೆಯನ್ನು ಕಹಿಯಾದವುಗಳಿಂದ ತುಂಬಿಸುತ್ತಾನೆ.


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”


ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು