Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:16 - ಕನ್ನಡ ಸತ್ಯವೇದವು C.L. Bible (BSI)

16 ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇವರಿಗಾಗಲಿ ಅಥವಾ ಇವರ ಪೂರ್ವಿಕರಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು, ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು” ಎಂದು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇವರಿಗಾಗಲಿ ಇವರ ಪಿತೃಗಳಿಗಾಗಲಿ ಗೊತ್ತಿಲ್ಲದ ಜನಾಂಗಗಳೊಳಗೆ ಇವರನ್ನು ಚದರಿಸಿಬಿಟ್ಟು ಇವರು ನಿರ್ಮೂಲವಾಗುವ ತನಕ ಖಡ್ಗವನ್ನು ಇವರ ಹಿಂದೆ ಕಳುಹಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಯೆಹೂದದ ಜನರನ್ನು ಬೇರೆ ಜನಾಂಗಗಳಲ್ಲಿ ಚದರಿಸಿಬಿಡುತ್ತೇನೆ. ಅವರು ಮತ್ತು ಅವರ ತಂದೆಗಳು ಎಂದೂ ಅರಿಯದ ಅಪರಿಚಿತ ದೇಶಗಳಲ್ಲಿ ಅವರು ವಾಸಿಸುವರು. ನಾನು ಖಡ್ಗಧಾರಿಗಳಾದ ಜನರನ್ನು ಕಳುಹಿಸುತ್ತೇನೆ. ಅವರು ಯೆಹೂದದ ಜನರನ್ನು ನಿರ್ಮೂಲವಾಗುವವರೆಗೆ ಕೊಲ್ಲುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:16
29 ತಿಳಿವುಗಳ ಹೋಲಿಕೆ  

ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.


ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


ಇಗೋ, ನಿಮಗೆ ಒಳಿತನ್ನು ಅಲ್ಲ, ಕೇಡನ್ನು ಬರಮಾಡಬೇಕೆಂದು ನಿಮ್ಮ ವಿಷಯದಲ್ಲಿ ಎಚ್ಚರಗೊಂಡಿದ್ದೇನೆ. ಈಜಿಪ್ಟಿನ ಎಲ್ಲ ಯೆಹೂದ್ಯರು ಖಡ್ಗ-ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.


ಆದಕಾರಣ ಬಿರುಗಾಳಿ ಬಡಿದುಕೊಂಡುಹೋಗುವ ಒಣಹುಲ್ಲೋ ಎಂಬಂತೆ ಸರ್ವೇಶ್ವರನಾದ ನಾನು ನಿನ್ನನ್ನು ಚದರಿಸಿಬಿಡುವೆನು.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿ ತಮ್ಮ ಪಿತೃಗಳ ವಿಗ್ರಹಗಳಲ್ಲೇ ಆಸಕ್ತರಾದರು.


“ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ


“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು, ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿ ಮಾಡುವಾಗ ನಾನೇ ಸರ್ವೇಶ್ವರ ಎಂದು ಅವನಿಗೆ ಗೊತ್ತಾಗುವುದು.


“ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು.


‘ಇಗೋ, ನಾನು ಅವರ ಮೇಲೆ ಖಡ್ಗ-ಕ್ಷಾಮ-ವ್ಯಾಧಿಗಳನ್ನು ಬರಮಾಡುವೆನು. ಯಾರೂ ತಿನ್ನಲಾಗದಷ್ಟು ಕೆಟ್ಟು ಅಸಹ್ಯವಾದ ಅಂಜೂರದ ಹಣ್ಣಿನ ಗತಿಗೆ ಅವರನ್ನು ಇಳಿಸುವೆನು.


ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’


ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”


ಚದರಿಸುವೆನು ನಿಮ್ಮ ಸಂತಾನವನು ಹೊರನಾಡುಗಳಲಿ I ಅಳಿದು ಹೋಗುವರವರು ಅನ್ಯಜನಾಂಗಗಳ ಮಧ್ಯೆಯಲಿ” I


ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು;


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


“ನರಪುತ್ರನೇ, ಟೈರ್‍ನಗರ ಕುರಿತ ಶೋಕಗೀತೆಯೊಂದನ್ನು ಹಾಡಿ, ಹೀಗೆಂದು ಹೇಳು:


ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು