Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:17 - ಕನ್ನಡ ಸತ್ಯವೇದವು C.L. Bible (BSI)

17 ಸರ್ವಶಕ್ತ ಸರ್ವೇಶ್ವರ ಸ್ವಾಮಿಯ ಮಾತು : “ನಡೆಯುತ್ತಿರುವ ಕಾರ್ಯಗಳನ್ನು ಆಲೋಚಿಸಿ ನೋಡಿ ರೋದನಾ ಗಾಯಕಿಯರನ್ನು ಕರೆಯಿಸಿರಿ ಅವರಲ್ಲಿ ಜಾಣೆಯರನ್ನು ಕರೆಯ ಕಳಿಸಿರಿ ಅವರೂ ಬಂದು ಸೇರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, “ನಿಮ್ಮ ಬಗ್ಗೆ ಯೋಚಿಸಿರಿ; ರೋದನ ಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ - [ನಿಮ್ಮ ಸಂಗತಿಯನ್ನು] ಯೋಚಿಸಿರಿ; ರೋದನಗಾಯಕಿಯರನ್ನು ಕರೆಯಿಸಿರಿ, ಅವರು ಬರಲಿ; ಜಾಣೆಯರನ್ನು ಕರೆಯ ಕಳುಹಿಸಿರಿ, ಅವರು ಸೇರಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸರ್ವಶಕ್ತನಾದ ಯೆಹೋವನು ಹೀಗೆ ಹೇಳುತ್ತಾನೆ: “ಈಗ ಈ ವಿಷಯಗಳ ಬಗ್ಗೆ ವಿಚಾರ ಮಾಡಿರಿ, ಶವಸಂಸ್ಕಾರದ ಸಮಯದಲ್ಲಿ ಕೂಲಿ ಪಡೆದು ಅಳುವ ಹೆಂಗಸರನ್ನು ಕರೆಯಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೆಕಳುಹಿಸಿರಿ, ಅವರು ಬರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:17
12 ತಿಳಿವುಗಳ ಹೋಲಿಕೆ  

ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.


ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು.


ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ!


ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು,


“ಎಲೈ ಜೆರುಸಲೇಮೇ ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


“ನರಪುತ್ರನೇ, ಟೈರ್‍ನಗರ ಕುರಿತ ಶೋಕಗೀತೆಯೊಂದನ್ನು ಹಾಡಿ, ಹೀಗೆಂದು ಹೇಳು:


ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”


ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ:


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು