Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:2 - ಕನ್ನಡ ಸತ್ಯವೇದವು C.L. Bible (BSI)

2 ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಕಟಾ, ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೇದು! ಆಗ ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ಸೂಳೆಗಾರರು, ದ್ರೋಹಿಗಳ ಗುಂಪೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಮರಳುಗಾಡಿನಲ್ಲಿ ನನಗೊಂದು ಸ್ಥಳವಿದ್ದಿದ್ದರೆ, ಪ್ರಯಾಣಿಕರು ರಾತ್ರಿಯಲ್ಲಿ ತಂಗುವ ಮನೆ ಇದ್ದಿದ್ದರೆ, ನಾನು ನನ್ನ ಜನರನ್ನು ಅಲ್ಲಿ ಬಿಟ್ಟು, ಅವರಿಂದ ದೂರ ಹೋಗಬಹುದಾಗಿತ್ತು. ಏಕೆಂದರೆ ಅವರೆಲ್ಲರೂ ದೇವರಿಗೆ ದ್ರೋಹ ಮಾಡುತ್ತಿದ್ದಾರೆ, ಅವರೆಲ್ಲರೂ ಆತನಿಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:2
24 ತಿಳಿವುಗಳ ಹೋಲಿಕೆ  

ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.


ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.


ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.


ಜುದೇಯದ ಜನರು ದ್ರೋಹಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ.


ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.


“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.


ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.


ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”


ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.


ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.


ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.


ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು