Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:24 - ಕನ್ನಡ ಸತ್ಯವೇದವು C.L. Bible (BSI)

24 ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು, ನಾನು ಲೋಕದಲ್ಲಿ ಪ್ರೀತಿ, ನೀತಿ ಮತ್ತು ನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬುವುದಕ್ಕೇ ಹೆಚ್ಚಳಪಡಲಿ; ಪ್ರೀತಿ, ನೀತಿ ಮತ್ತು ನ್ಯಾಯಗಳೇ ನನಗೆ ಆನಂದ” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಹೆಚ್ಚಳಪಡುವವನು ತಾನು ನನ್ನನ್ನು ತಿಳಿದು ನಾನು ಲೋಕದಲ್ಲಿ ಪ್ರೀತಿನೀತಿನ್ಯಾಯಗಳನ್ನು ತೋರ್ಪಡಿಸುವ ಯೆಹೋವನಾಗಿರುವೆನು ಎಂದು ಗ್ರಹಿಸಿಕೊಂಡಿದ್ದೇನೆ ಎಂಬದಕ್ಕೇ ಹೆಚ್ಚಳಪಡಲಿ; ಪ್ರೀತಿನೀತಿನ್ಯಾಯಗಳೇ ನನಗೆ ಆನಂದವೆಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯಾವನಾದರೂ ಜಂಬಕೊಚ್ಚಿಕೊಳ್ಳಬೇಕಾದರೆ, ಅವನು ನನ್ನನ್ನು ಅರಿತಿರುವುದಾಗಿಯೂ ನನ್ನನ್ನು ತಿಳಿದುಕೊಂಡಿರುವುದಾಗಿಯೂ ಜಂಬಪಡಲಿ. ನಾನೇ ಯೆಹೋವನೆಂದು ತಿಳಿದುಕೊಂಡಿರುವುದಕ್ಕಾಗಿ ಅವನು ಜಂಬಪಡಲಿ. ನಾನು ದಯಾವಂತನೂ ನ್ಯಾಯವಂತನೂ ಆಗಿರುವೆ, ನಾನು ಭೂಲೋಕದಲ್ಲಿ ಒಳ್ಳೆಯದನ್ನು ಮಾಡುತ್ತೇನೆ ಎಂದು ತಿಳಿದುಕೊಂಡಿರುವವನು ಹೆಮ್ಮೆಪಡಲಿ. ಆಗ ನನಗೆ ಸಂತೋಷವಾಗುವುದು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:24
33 ತಿಳಿವುಗಳ ಹೋಲಿಕೆ  

“ಹೆಚ್ಚಳಪಡುವವನು ಪ್ರಭುವಿನಲ್ಲೇ ಹೆಚ್ಚಳಪಡಲಿ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.


ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.


ನಿನ್ನಲ್ಲಿಯೇ ದೇವಾ, ಹೆಮ್ಮೆಪಡುವೆವು ಸತತ I ನಿನ್ನ ನಾಮವನೆ ಸಂಕೀರ್ತಿಸುವೆವು ನಿರುತ II


ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.


ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.


ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II


ಪ್ರಭು : “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II


ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ .


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.


ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.


“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.


ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.


ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I


ಸುಡಾನನ್ನು ನೆಚ್ಚಿಕೊಂಡಿದ್ದವರು ಮತ್ತು ಈಜಿಪ್ಟನ್ನು ಕುರಿತು ಕೊಚ್ಚಿಕೊಳ್ಳುತ್ತಿದ್ದವರು ನಾಚಿಕೆಪಟ್ಟು ನಿರಾಶೆಗೊಳ್ಳುವರು.


ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.


ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II


ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು