Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:5 - ಕನ್ನಡ ಸತ್ಯವೇದವು C.L. Bible (BSI)

5 ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ; ತಮಗೆ ಆಯಾಸವಾಗುವ ಮಟ್ಟಿಗೂ ಕೆಡುಕನ್ನು ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರತಿಯೊಬ್ಬನೂ ತನ್ನ ನೆರೆಯವನಿಗೆ ಸುಳ್ಳು ಹೇಳುತ್ತಾನೆ. ಒಬ್ಬನೂ ಸತ್ಯವನ್ನು ನುಡಿಯುವದಿಲ್ಲ. ಯೆಹೂದದ ಜನರು ತಮ್ಮ ನಾಲಿಗೆಗಳಿಗೆ ಸುಳ್ಳು ಹೇಳುವದನ್ನು ಕಲಿಸಿದ್ದಾರೆ. ಅವರು ಹಿಂತಿರುಗಿ ಬರಲು ಆಯಾಸವಾಗುವಷ್ಟು ಪಾಪಗಳನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:5
32 ತಿಳಿವುಗಳ ಹೋಲಿಕೆ  

ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ನಡೆದು ನಡೆದು ದಣಿದಿದ್ದರೂ ‘ಇನ್ನು ಪ್ರಯೋಜನವಿಲ್ಲ’ ಎಂದುಕೊಳ್ಳಲಿಲ್ಲ. ಹೊಸ ಚೈತನ್ಯವನ್ನು ತಂದುಕೊಂಡು ನಿಲ್ಲದೆ ಮುಂದುವರೆದಿರುವೆ.


ನಿನ್ನ ಪಾಪವೆ ನಿನಗೆ ಮಾತನು ಕಲಿಸಿಕೊಟ್ಟಿದೆ ಕಪಟಿಗಳಾಡುವ ನುಡಿಯನೆ ನೀನು ಆರಿಸಿಕೊಂಡಿರುವೆ.


ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.


ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.


ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.


ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.


ಅವರ ನಾಲಿಗೆ ಕೊಲ್ಲುವ ಬಾಣ, ಅದು ಆಡುವುದು ಸುಳ್ಳನ್ನೇ ಬಾಯಲ್ಲಿ ಶುಭವೆಂದು ಹೇಳಿದರೂ ಹೃದಯದಲ್ಲಿ ಒಡ್ಡಿದ್ದಾರೆ ಹೊಂಚನ್ನೇ.


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ಅಕ್ರಮವೆಂಬ ಹಗ್ಗಗಳಿಂದ ಅಪರಾಧ ಎಂಬ ತೇರನ್ನು ಎಳೆಯುವವರಿಗೆ ಧಿಕ್ಕಾರ !


ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.


ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II


ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II


ನಿಮ್ಮ ಬಾಯನ್ನಾಳುತ್ತದೆ ಕೆಡುಕುತನ I ನಿಮ್ಮ ನಾಲಿಗೆ ನೇಯುತ್ತದೆ ಕಪಟತನ II


ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II


ನಿನ್ನ ವಾಕ್ ಚಮತ್ಕಾರಕ್ಕೆ ಜನ ಬಾಯಿಮುಚ್ಚಿಕೊಳ್ಳಬೇಕೆ? ನಿನ್ನ ಕುಚೋದ್ಯಕ್ಕೆ ನಿನಗಾಗಬೇಡವೆ ನಾಚಿಕೆ?


ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.


ಒಳಿತಿಗಿಂತ ಕೆಡಕು ಮಾಡುವುದು ನಿನಗಿಷ್ಟ I ಸತ್ಯಕ್ಕಿಂತ ಸುಳ್ಳಾಡುವುದೇ ನಿನ್ನ ಚಟ II


ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”


ಎಥಿಯೋಪಿಯದವನು ತನ್ನ ಚರ್ಮದ ಬಣ್ಣವನ್ನು ಮಾರ್ಪಡಿಸಬಲ್ಲನೆ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೆ? ಅಂತೆಯೇ ದುಷ್ಟತನದಲ್ಲಿ ಅಷ್ಟಾಗಿ ನುರಿತ ನೀನು ಶಿಷ್ಟತನದಲ್ಲಿ ನಡೆಯಲಾರೆ.


ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”


ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.


ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?


ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.


ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.


ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು