Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 9:8 - ಕನ್ನಡ ಸತ್ಯವೇದವು C.L. Bible (BSI)

8 ಅವರ ನಾಲಿಗೆ ಕೊಲ್ಲುವ ಬಾಣ, ಅದು ಆಡುವುದು ಸುಳ್ಳನ್ನೇ ಬಾಯಲ್ಲಿ ಶುಭವೆಂದು ಹೇಳಿದರೂ ಹೃದಯದಲ್ಲಿ ಒಡ್ಡಿದ್ದಾರೆ ಹೊಂಚನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದೂ ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವರ ನಾಲಿಗೆಯು ಕೊಲ್ಲುವ ಬಾಣವಾಗಿದೆ, ಅದು ಸುಳ್ಳನ್ನೇ ಆಡುತ್ತದೆ; ಒಬ್ಬನು ತನ್ನ ನೆರೆಯವನಿಗೆ ಬಾಯಿಂದ ಶುಭವಾಗಲಿ ಎಂದು ಹೇಳಿದರೂ ತನ್ನ ಹೃದಯದಲ್ಲಿ ಅವನಿಗಾಗಿ ಹೊಂಚುಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೂದದ ಜನರ ನಾಲಿಗೆಗಳು ಚೂಪಾದ ಬಾಣಗಳಂತಿವೆ. ಅವರ ಬಾಯಿಗಳು ಸುಳ್ಳಾಡುತ್ತವೆ. ಪ್ರತಿಯೊಬ್ಬನು ತನ್ನ ನೆರೆಮನೆಯವನೊಂದಿಗೆ ನಯವಾಗಿ ಮಾತನಾಡುತ್ತಾನೆ. ರಹಸ್ಯವಾಗಿ ತನ್ನ ನೆರೆಮನೆಯವನನ್ನು ಆಕ್ರಮಣಮಾಡಲು ಯುಕ್ತಿ ಮಾಡುತ್ತಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ನಾಲಿಗೆ ಎಸೆದ ಬಾಣದಂತಿದೆ. ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ, ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 9:8
21 ತಿಳಿವುಗಳ ಹೋಲಿಕೆ  

ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II


ಸರ್ವೇಶ್ವರ : “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”


ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II


ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.


ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.


“ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ.


ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II


ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II


ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಕೊಡತಿಗೆ, ಕತ್ತಿಗೆ, ಹರಿತವಾದ ಬಾಣಕ್ಕೆ ಸಮಾನನು.


ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.


ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.


ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II


ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II


ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು